ಬೆಂಗಳೂರಿನಲ್ಲೂ 3 ದಿನ ಸಾಧಾರಣ ಮಳೆ!
ಆಂಧ್ರ ಪ್ರದೇಶ ಹಾಗೂ ಒಡಿಶಾ ಕಡಲ ತೀರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜಧಾನಿ ಬೆಂಗಳೂರಿನ ಮೇಲೂ ಆಗಿದ್ದು, ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಜಡಿ ಮಳೆ ಆರಂಭವಾಗಿದೆ.
ಬೆಂಗಳೂರು: ಆಂಧ್ರ ಪ್ರದೇಶ ಹಾಗೂ ಒಡಿಶಾ ಕಡಲ ತೀರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜಧಾನಿ ಬೆಂಗಳೂರಿನ ಮೇಲೂ ಆಗಿದ್ದು, ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಜಡಿ ಮಳೆ ಆರಂಭವಾಗಿದೆ.
ಕಳೆದ ರಾತ್ರಿ ಕೂಡ ಬೆಂಗಳೂರಿನಾದ್ಯಂತ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಛತ್ರಿ ಮತ್ತು ರೈನ್ ಕೋಟ್ ಗಳನ್ನು ಧರಿಸಿಯೇ ಜನರು ಕಚೇರಿಗೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಬೆಂಗಳೂರಿನಲ್ಲಿ ಇನ್ನೂ 3 ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಮೂರು ದಿನಗಳ ಕಾಲ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕಿ ಗೀತಾ ಅಗ್ನಿ ಹೋತ್ರಿ ತಿಳಿಸಿದ್ದಾರೆ.
ಬೆಂಗಳೂರಿನ ಉಷ್ಣಾಂಶ ಕೂಡ ಕನಿಷ್ಟ ಮಟ್ಟಕ್ಕೆ ಕುಸಿದಿದ್ದು, ಬೆಳಗ್ಗೆ 9 ಗಂಟೆ ವೇಳೆಗೆ 23 ಡಿಗ್ರಿ ಉಷ್ಣಾಂಶ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.