ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಿಗ್ನಲ್ ನಲ್ಲಿ ವ್ಹೀಲಿಂಗ್, ಯುವಕನ ಬಂಧನ

ಬಾಣಸವಾಡಿ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಆರೋಪದಡಿ  ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ..,.

ಬೆಂಗಳೂರು: ಬಾಣಸವಾಡಿ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌  ಮಾಡುತ್ತಿದ್ದ ಆರೋಪದಡಿ  ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ನಾಗವಾರದ ಮಹಮ್ಮದ್‌ ರಿಯಾಜ್‌, ಬಂಧಿತ ಆರೋಪಿ. ಸೆ. 15ರಂದು ಹೊರವರ್ತುಲ ರಸ್ತೆಗೆ ಕರ್ಕಶ ಶಬ್ದ ಮಾಡುತ್ತಿದ್ದ ತನ್ನ ಯಮಹಾ ಬೈಕ್‌ ತೆಗೆದುಕೊಂಡು ಬಂದಿದ್ದ ರಿಯಾಜ್‌, ವ್ಹೀಲಿಂಗ್‌ ಮಾಡುತ್ತಿದ್ದ. ಈ ವೇಳೆ ಹಲವು ವಾಹನಗಳಿಗೆ ಅಡ್ಡಿಪಡಿಸಿದ್ದ. ಆ ಬಗ್ಗೆ ಸಾರ್ವಜನಿಕರೊಬ್ಬರು ನೀಡಿದ್ದ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಆತನನ್ನು ಬಂಧಿಸಲಾಯಿತು. ಬಂಧಿತನ ಬಳಿ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹೊರವರ್ತುಲ ರಸ್ತೆಯಲ್ಲಿ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅವರು ಮಧ್ಯಾಹ್ನ ಊಟ ಹಾಗೂ ಸಂಜೆ ಚಹಾ ವಿರಾಮ ಪಡೆಯುತ್ತಿದ್ದರು. ಪೊಲೀಸರಿಲ್ಲದ ಸಮಯವನ್ನು ನೋಡಿ ವ್ಹೀಲಿಂಗ್ ಮಾಡುತ್ತಿದ್ದ ರಿಯಾಜ್, ಅಷ್ಟರಲ್ಲಿ ಸ್ಥಳಕ್ಕೆ ಬಂದ ಪೊಲೀಸರನ್ನ ನೋಡಿ ರಿಯಾಜ್ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಕಾರ್ಯ ಪ್ರವೃತ್ತರಾದ ಪೋಲೀಸರು ಆತನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!