ಬೆಂಗಳೂರು: ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಹಂತಕರು ಅತ್ತೆ-ಸೊಸೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಬೆಂಗಳೂರಿನ ವಸಂತನಗರ ಬಳಿಯ ಕಂಟೋನ್‌ಮೆಂಟ್ ಪ್ರದೇಶದಲ್ಲಿ ವಾಸವಾಗಿರುವ 50 ವರ್ಷದ ಸಂತೋಷಿಬಾಯಿ ಹಾಗೂ 30 ವರ್ಷದ ಲತಾ ಎಂಬುವರ ಮನೆಗೆ ಬೆಳಗ್ಗೆ 8 ಗಂಟೆ ಸುಮಾರಿಗೆ ನುಗ್ಗಿದ ಹಂತಕರು ಅತ್ತೆ-ಸೊಸೆಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.
ಹತ್ಯೆ ನಡೆದ ಮನೆಗೆ ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.