ಕೃಷ್ಣರಾಜ ಸಾಗರ ಜಲಾಶಯ 
ರಾಜ್ಯ

ಕಳೆದ 25 ವರ್ಷಗಳಲ್ಲಿ ಕರ್ನಾಟಕ ತಮಿಳುನಾಡಿಗೆ ಬಿಟ್ಟ ಹೆಚ್ಚುವರಿ ನೀರು ಎಷ್ಟು ಟಿಎಂಸಿ ಗೊತ್ತೆ?

ಕರ್ನಾಟಕ ತಮಿಳುನಾಡಿಗೆ ಎಷ್ಟು ನೀರು ಬಿಡಬೇಕು ಎಂಬದನ್ನು 2007 ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ಸೂಚಿಸಿತ್ತು. ಆದರೆ ಕಳೆದ 25 ವರ್ಷಗಳಲ್ಲಿ ಕರ್ನಾಟಕ ...

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರು ಇಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡಬೇಕು ಎಂದು ಸುಪ್ರೀಂಕೋರ್ಟ್ ಮತ್ತೆ ಆದೇಶಿಸಿದೆ. ಆದರೆ ಕರ್ನಾಟಕ ತಮಿಳುನಾಡಿಗೆ ಎಷ್ಟು ನೀರು ಬಿಡಬೇಕು ಎಂಬದನ್ನು 2007 ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ಸೂಚಿಸಿತ್ತು. ಆದರೆ ಕಳೆದ 25 ವರ್ಷಗಳಲ್ಲಿ ಕರ್ನಾಟಕ 1,470.76 ಟಿಎಂಸಿ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಹರಿಸಿದೆ.

ರಾಜ್ಯ ನೀರಾವರಿ ಇಲಾಖೆ ಅಂಕಿ ಅಂಶಗಳ ಮಾಹಿತಿ ಪ್ರಕಾರ ಕಳೆದ 25 ವರ್ಷಗಳಲ್ಲಿ ಕರ್ನಾಟಕ ಒಟ್ಟು 6,083.64 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಿದೆ.

1992ರ ಮಧ್ಯಂತರ ಆದೇಶದ ನಂತರ 1,087.25 ಟಿಎಂಸಿ ಹೆಚ್ಚುವರಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಡುಗಡೆ ಮಾಡಿತ್ತು. 2007 ರಲ್ಲಿ ನ್ಯಾಯಾಧೀಕರಣ ಅಂತಿಮ ಆದೇಶ ನೀಡಿದ ನಂತರ ಅಂದರೆ, 2007 ರಿಂದ 2015 ರ ವರೆಗೆ 383.51 ಟಿಎಂಸಿ ಹೆಚ್ಚುವರಿ ನೀರನ್ನು ರಾಜ್ಯ ತಮಿಳುನಾಡಿಗೆ ಹರಿಸಿದೆ.

ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಕರ್ನಾಟಕ ಬಿಳಿಗುಂಡ್ಲು ಗೇಜಿಂಗ್ ಸೆಂಟರ್ ನಿಂದ 192 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂದು 2007 ರಲ್ಲಿ ಕಾವೇರಿ ನ್ಯಾಯಾಧೀಕರಣ ಅಂತಿಮ ತೀರ್ಪು ನೀಡಿತು. ಅದರಂತೆ 2007-08 ರಿಂದ 2015-16 ರವರೆಗೆ ರಾಜ್ಯ ಸುಮಾರು 1.984.34 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಿದೆ.

ಮತ್ತೊಂದು ಆಸಕ್ತಿದಾಯಕ ವಿಚಾರ ಎಂದರೇ ಕರ್ನಾಟಕದಲ್ಲಿರುವ ಜಲಾಶಯಗಳು ಕಡಿಮೆ ನೀರು ಸಂಗ್ರಹದ ಸಾಮರ್ಥ್ಯ ಹೊಂದಿವೆ. ಹೀಗಾಗಿ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ.

ತಮಿಳು ನಾಡಿನ ಮೆಟ್ಟೂರು ಜಲಾಶಯಕ್ಕೆ ಹೋಲಿಸಿದರೇ ಕೆಆರ್ ಎಸ್ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ಜಲಾಶಯಗಳ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಿದೆ. ಹೀಗಾಗಿ ಮೇಕೆದಾಟು ಯೋಜನೆ ಸಫಲವಾದರೇ ಹೆಚ್ಚುವರಿ ನೀರನ್ನು  ಸಂಗ್ರಹ ಮಾಡಿಕೊಳ್ಳಲು ಸಹಾಯವಾಗುತ್ತದೆ.

ಕಾವೇರಿ ನ್ಯಾಯಾಧೀಕರಣ ಆದೇಶದಂತೆ ಇದುವರೆಗೂ ರಾಜ್ಯ ತಮಿಳುನಾಡಿಗೆ 134 ಟಿಎಂಸಿ ನೀರು ಬಿಡುಗಡೆ ಮಾಡಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಈ ಬಾರಿ ಉತ್ತಮ ಮಳೆಯಾಗದ ಕಾರಣ ಉಳಿದ ನೀರನ್ನು ಬಿಡಲಾಗುತ್ತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!