ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. 1981ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಕುಂಟಿಯಾ ಅವರು ಸೆ.30ಕ್ಕೆ ನಿವೃತ್ತರಾಗಲಿರುವ ಹಾಲಿ ಸಿಎಸ್ ಅರವಿಂದ್ ಜಾಧವ್ ಅವರ ಜಾಗಕ್ಕೆ ಬರಲಿದ್ದಾರೆ. ಹೀಗಾಗಿ ಸುಭಾಷ್ ಚಂದ್ರ ಅವರು ಅಕ್ಟೋಬರ್ 1 ರಿಂದ ಮುಖ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಮತ್ತೊಬ್ಬ ಐಎಎಸ್ ಅಧಿಕಾರಿ ರತ್ನಪ್ರಭಾ ಹಾಗೂ ಕುಂಟಿಯಾ ಹಾಗೂ ಎಸ್ ಪಟ್ನಾಯಕ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ರತ್ನ ಪ್ರಭ ಮತ್ತು ಸುಭಾಷ ಚಂದ್ರ 1981 ನೇ ಬ್ಯಾಚ್ ನವರಾಗಿದ್ದು, ಪಟ್ನಾಯಕ್ ಅವರಿಗಿಂತ ಕಿರಿಯರು. ಹೀಗಾಗಿ ಸೇವಾವಧಿ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಕುಂಟಿಯಾ ಅವರನ್ನೇ ನೂತನ ಮುಖ್ಯಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದಾರೆ.