ಡಿವೈಎಸ್ಪಿ ಗಣಪತಿ 
ರಾಜ್ಯ

ಸಿಐಡಿ 'ಬಿ' ರಿಪೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಲ್ಲ: ಗಣಪತಿ ಪುತ್ರ ನೇಹಾಲ್

ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್‌ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್‌ ಅನ್ನು ಗಣಪತಿ ಅವರ ಪುತ್ರ ,,,

ಮಡಿಕೇರಿ: ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್‌ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್‌ ಅನ್ನು ಗಣಪತಿ ಅವರ ಪುತ್ರ ನೇಹಾಲ್‌ ಒಪ್ಪಿಕೊಂಡಿದ್ದಾರೆ. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿಲ್ಲ ಎಂದು ಮಾಧ್ಯಮ ವರದಿ ಮಾಡಿದೆ.

ವಿದ್ಯಾಭ್ಯಾಸ, ಮನೆಯ ಜವಾಬ್ದಾರಿ ಇರುವುದರಿಂದ ಪದೇ ಪದೇ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗುವುದಿಲ್ಲ, ಈ ಹಿನ್ನೆಲೆಯಲ್ಲಿ ತಕರಾರು ಅರ್ಜಿ ಸಲ್ಲಿಸುತ್ತಿಲ್ಲ ಎಂದು ನೇಹಾಲ್ ಹೇಳಿದ್ದಾರೆ ಎನ್ನಲಾಗಿದೆ.

ಗಣಪತಿ ಅವರ ತಂದೆ ಕುಶಾಲಪ್ಪ, ಸೋದರ ಮಾಚಯ್ಯ, ಸೋದರಿಯರು ನ್ಯಾಯಾಲಯಕ್ಕೆ ಆಗಮಿಸಿದ್ದು, ತಮ್ಮನ್ನು ದೂರುದಾರರಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆಯಲ್ಲಿ ನಮ್ಮನ್ನು ಸಂಪರ್ಕಿಸದೆ ಕೈ ಬಿಟ್ಟಿದ್ದಾರೆ, ಕಾರಣ ಏನೆಂದು ಗೊತ್ತಿಲ್ಲ ಎಂಬುದಾಗಿ ಗಣಪತಿ ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. ಇವರು ಸಲ್ಲಿಸಿರುವ ಮನವಿಯ ವಿಚಾರಣೆ ಅ.24ಕ್ಕೆ ನಿಗದಿಯಾಗಿದೆ.

ಪ್ರಕರಣದ ಆರೋಪಿಯಾಗಿದ್ದ ಜಾರ್ಜ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಐಡಿಯಿಂದ ಕ್ಲೀನ್‌ಚಿಟ್‌ ಪಡೆದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ