ಡಾ. ಅಶೋಕ್ ಪೈ(ಸಂಗ್ರಹ ಚಿತ್ರ)
ಸ್ಕಾಟ್ಲೆಂಡ್ : ಖ್ಯಾತ ಮನೋವೈದ್ಯ ಡಾ.ಅಶೋಕ್ ಪೈ ಕಳೆದ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಪೈ ಅವರು ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲೆಂದು ಪತ್ನಿ ರಜನಿ ಪೈ ಅವರ ಜತೆಗೆ ಸ್ಕಾಟ್ಲೆಂಡ್‍ಗೆ ತೆರಳಿದ್ದ ವೇಳೆ ಅಲ್ಲಿ ಹೃದಯಾಘಾತವಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಶಿವಮೊಗ್ಗದಲ್ಲಿ ಮಾನಸ ನರ್ಸಿಂಗ್ ಹೋಮ್ ಆಸ್ಪತ್ರೆ ನಡೆಸುತ್ತಿದ್ದ ಪೈ ಅವರು ಕಾಡಿನ ಬೆಂಕಿ, ಉಷಾಕಿರಣ, ಆಘಾತ ಮೊದಲಾದ ಸಿನಿಮಾಗಳನ್ನು ನಿರ್ಮಿಸಿದ್ದರು.
ಪೈ ಅವರು ಕರ್ನಾಟಕ ಮಾನಸಿಕ ಆರೋಗ್ಯ ಕಾರ್ಯಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಬಹಳಷ್ಟು ಪುಸ್ತಕಗಳನ್ನು ಬರೆದಿರುವ ಅವರು ನಿರ್ಮಿಸಿರುವ ಚಿತ್ರಗಳಿಗೆ ಪ್ರಶಸ್ತಿಗಳು ಸಂದಿವೆ.
ಕರ್ನಾಟಕ ಮಾನಸಿಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪೈ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಹಲವು ಗೌರವ ಸಂದಿದೆ.ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.