ಮೈಸೂರು ಅರಮನೆ 
ರಾಜ್ಯ

ಇಂದಿನಿಂದ ವಿಶ್ವ ವಿಖ್ಯಾತ ಮೈಸೂರು ದಸರಾ: ರಂಗಿನೋಕುಳಿಯಲ್ಲಿ ಮಿಂದೆದ್ದ ಸಾಂಸ್ಕೃತಿಕ ನಗರಿ

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ದೊರೆಯಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಎಲ್ಲಾ ರಸ್ತೆಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ..

ಮೈಸೂರು/ ಮಂಡ್ಯ: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ದೊರೆಯಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಎಲ್ಲಾ ರಸ್ತೆಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ, ರಾಜಮಾರ್ಗ ಸೇರಿದಂತೆ ಎಲ್ಲಾ ರಸ್ತೆಗಳು ರಂಗೇರಿವೆ. ಪಾರಂಪರಿಕ ಕಟ್ಟಟಗಳಿಗೆ ಆಕರ್ಷಕವಾಗಿ ಶೃಂಗಾರ ಮಾಡಲಾಗಿದೆ. ಎಲ್ಲಾ ಸರ್ಕಾರಿ ಕಟ್ಟಡಗಳು ಮತ್ತು ವೃತ್ತಗಳು ಸಿಂಗಾರಗೊಂಡು ವೈಭವದ ದಸರಾ ಆಚರಿಸಲು ಸಿದ್ದಗೊಂಡಿವೆ.

ಬಸವೇಶ್ವರ ವೃತ್ತದಲ್ಲಿ ಜಯಚಾಮರಾಜ ಒಡೆಯರ್, ಪಾಠಶಾಲಾದಲ್ಲಿ ಗಂಡಭೇರುಂಡ, ಕುರುಬರಹಳ್ಳಿ ವೃತ್ತದಲ್ಲಿ ಚಾಮುಂಡೇಶ್ವರಿ, ರೈಲ್ವೆ ನಿಲ್ದಾಣದಲ್ಲಿ ವಿಧಾನ ಸೌಧ ಮತ್ತು ಸಂಸತ್ ನ ಪ್ರತಿಕೃತಿಗಳು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿವೆ.

ಸಯ್ಯಾಜಿ ರಾವ್ ರಸ್ತೆಯಲ್ಲಿ ಹಸಿರು ಚಪ್ಪರ ಎಲ್ಲರ ಕಣ್ಮನ ಸೂರೆಗೊಳ್ಳುತ್ತಿದೆ. ಜಗಮಗಿಸುವ ಲೈಟ್ ನಲ್ಲಿ ಪ್ರವಾಸಿಗರು ಸೆಲ್ಪೀ ತೆಗೆದುಕೊಳ್ಳಲು ತೊಡಗಿದ್ದಾರೆ. ಈ ಬಾರಿ ಮೈಸೂರಿನ ಎಲ್ಲಾ ರಸ್ತೆಗಳು ವರ್ಣರಂಜಿತ ಕಲರ್ ಫುಲ್ ಎಲ್ ಇಡಿ ಬಲ್ಬ್ ಗಳಿಂದ ಕಂಗೊಳಿಸುತ್ತಿವೆ.

ಮೈಸೂರು ಚಾಮುಂಡಿಬೆಟ್ಟದಲ್ಲಿ ಶನಿವಾರ ಬೆಳಗ್ಗೆ 11.40ರಿಂದ ಸಲ್ಲುವ ಧನುರ್‌ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚೆನ್ನವೀರ ಕಣವಿ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ಮಹದೇವಪ್ರಸಾದ್‌, ತನ್ವೀರ್‌ ಸೇಠ್, ಉಮಾಶ್ರೀ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಇದೇ ವೇಳೆ ದಸರಾ ಕ್ರೀಡಾಕೂಟ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ, ಫ‌ಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಯುವ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳೂ ಶನಿವಾರವೇ ಉದ್ಘಾಟನೆಗೊಳ್ಳಲಿವೆ.

ಒಂಬತ್ತು ದಿನಗಳ ಕಾಲ ನವರಾತ್ರಿ ಉತ್ಸವ ನಡೆಯಲಿದ್ದು, ಪ್ರತಿನಿತ್ಯ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್‌ 11ಕ್ಕೆ ಮಧ್ಯಾಹ್ನ 2.14ಕ್ಕೆ ಜಂಬೂ ಸವಾರಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿ ಪಂಜಿನ ಕವಾಯತ್‌ ನಡೆಯಲಿದೆ.

ಈ ನಡುವೆ ರಾಜಮನೆತನದಿಂದ ಅಕ್ಟೋಬರ್‌ 10ರಂದು ಆಯುಧ ಪೂಜೆ ಹಾಗೂ ಖಾಸಗಿ ದರ್ಬಾರ್‌ ನಡೆಯಲಿದೆ. ರಾಜಮನೆತನದ ಯದುವೀರ್‌ ಶ್ರೀಕಂಠದತ್ತ ಚಾಮರಾಜ ಒಡೆಯರ್‌ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ. ಯದುವೀರ್‌ಗೆ ಇದು ಎರಡನೇ ಖಾಸಗಿ ದರ್ಬಾರ್‌ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT