ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ 
ರಾಜ್ಯ

ಮತ್ತೆ ಮರಳು ಮಾಫಿಯಾ ಅಟ್ಟಹಾಸ; ಉಡುಪಿ ಜಿಲ್ಲಾಧಿಕಾರಿ ಹತ್ಯೆಗೆ ಯತ್ನ!

ಉಡುಪಿಯಲ್ಲಿ ಮತ್ತೆ ಮರಳು ಮಾಫಿಯಾ ಅಟ್ಟಹಾಸ ಮುಂದುವರೆದಿದ್ದು, ಅಕ್ರಮ ಮರಳು ಲಾರಿಗಳನ್ನು ತಡೆಯಲೆತ್ನಿಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರನ್ನು ಕೊಲೆಗೈಯ್ಯಲು ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ: ಉಡುಪಿಯಲ್ಲಿ ಮತ್ತೆ ಮರಳು ಮಾಫಿಯಾ ಅಟ್ಟಹಾಸ ಮುಂದುವರೆದಿದ್ದು, ಅಕ್ರಮ ಮರಳು ಲಾರಿಗಳನ್ನು ತಡೆಯಲೆತ್ನಿಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರನ್ನು ಕೊಲೆಗೈಯ್ಯಲು ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವತಃ ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರು ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಕುಂದಾಪುರ ಬಳಿಯ ಕಂಡ್ಲೂರು ಬಳಿ ಅಕ್ರಮ ಮರಳು ಸಾಗಣೆ ತಡೆಯಲೆತ್ನಿಸಿದ ತಮ್ಮ ಮತ್ತು ತಮ್ಮ ಸಹಾಯಕ ಅಧಿಕಾರಿ ಶಿಲ್ಪಾ  ನಾಗ್ ಅವರ ಮೇಲೆ ಮರಳು ಮಾಫಿಯಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ತಮ್ಮನ್ನು ಕೊಲೆಗೈಯ್ಯಲು ಯತ್ನಿಸಿದ್ದು, ತಮ್ಮ ಕಾರಿಗೆ ಬೆಂಕಿ ಹಚ್ಚುವ ಪ್ರಯತ್ನ ಕೂಡ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದಕ್ಕೂ ಮೊದಲು ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರು ಹಲ್ನಾಡ್ ಸಮೀಪ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆ ಅಡ್ಡೆಗಳ ಮೇಲೆ ದಾಳಿ ಮಾಡಿ 6 ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ  ಕಂಡ್ಲೂರು ಸಮೀಪ ಕೂಡ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅಲ್ಲಿಯೂ ಇದೇ ತಂಡ ದಾಳಿ ಮಾಡಿತ್ತು. ಈ ವೇಳೆ ಅಲ್ಲಿದ್ದ ಕೆಲ ದುಷ್ಕರ್ಮಿಗಳು ಉಪ ಜಿಲ್ಲಾಧಿಕಾರಿಗಳ ಇಬ್ಬರು ಚಾಲಕರು ಹಾಗೂ ಗನ್ ಮ್ಯಾನ್  ಗಳ ಮೇಲೆ ಹಲ್ಲೆ ಮಾಡಿದ್ದಾರೆ. ಇದಲ್ಲದೇ ಉಪ ಜಿಲ್ಲಾಧಾಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಗ್ರಾಮ ಲೆಕ್ಕಿಗ ಕಾಂತರಾಜು ಎಂಬ ಅಧಿಕಾರಿ ಮೇಲೂ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರು ಮರಳು ಮಾಫಿಯಾ ಮೇಲೆ ದಾಳಿ ಮಾಡುವ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲವಂತೆ. ಪೊಲೀಸರಿಗೆ ಮಾಹಿತಿ ನೀಡಿದರೆ ಎಲ್ಲಿ ದಾಳಿ ವಿಚಾರ  ದುಷ್ಕರ್ಮಿಗಳಿಗೆ ತಿಳಿಯುತ್ತದೆಯೋ ಎಂದು ಶಂಕಿಸಿ ಪೊಲೀಸರಿಗೆ ವಿಚಾರ ತಿಳಿಸದೇ ಖಾಸಗಿ ಕಾರಿನಲ್ಲಿ ತೆರಳಿ ದಾಳಿ ನಡೆಸಿದ್ದರು ಎಂದು ತಿಳಿದುಬಂದಿದೆ.

ಪ್ರಸ್ತುತ ಜಿಲ್ಲಾಧಾಧಿಕಾರಿಗಳ ದೂರಿನ ಮೇರೆಗೆ 6 ಮಂದಿ ದುಷ್ಕರ್ಮಿಗಳು ಹಾಗೂ 6 ಮಂದಿ ಸ್ಥಳೀಯ ಗ್ರಾಮಸ್ಥರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರನ್ನೂ ಇಂದು ನ್ಯಾಯಾಲಯದ  ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.

ಕಳೆದ ಫೆಬ್ರವರಿಯಲ್ಲಷ್ಟೇ ಉಡುಪಿ ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಭಡ್ತಿ ಪಡೆದು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT