ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು’ ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿರುವ ಪಿ.ನಾಗರಾಜು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಲೇವಾರಿ ಮಾಡಿತು. ಈ ವೇಳೆ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದೆ.
ಅರ್ಜಿದಾರರ ಪರ ಹಾಜರಾಗಿದ್ದ ಎಂ.ಆರ್.ರಾಜಗೋಪಾಲ, ಅಧ್ಯಕ್ಷ ಸ್ಥಾನಕ್ಕೆ ನಾಗರಾಜು ರಾಜೀನಾಮೆ ನೀಡಿಲ್ಲ. ರಾಜೀನಾಮೆ ಪತ್ರವನ್ನು ಸೃಷ್ಟಿಸಲಾಗಿದೆ ಎಂದು ಆಕ್ಷೇಪಿಸಿದರು. ಏಕಸದಸ್ಯ ಪೀಠವು ಮೂಲ ಅರ್ಜಿಯ ವಿಚಾರಣೆ ನಡೆಸಲಿ ಎಂದು ನ್ಯಾಯಪೀಠವು ಆದೇಶಿಸಿದೆ.