ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ನಂತರ ಅತ್ಯಾಚಾರ ಆರೋಪಿ ಬಂಧನ

13 ವರ್ಷದ ಬಾಲಕಿಯೊಬ್ಬಳು ಬುಧವಾರ ಮಗುವಿಗೆ ಜನ್ಮ ನೀಡಿದ ನಂತರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ 23 ವರ್ಷದ ಯುವಕನನ್ನು...

ಬೆಂಗಳೂರು: 13 ವರ್ಷದ ಬಾಲಕಿಯೊಬ್ಬಳು ಬುಧವಾರ ಮಗುವಿಗೆ ಜನ್ಮ ನೀಡಿದ ನಂತರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ 23 ವರ್ಷದ ಯುವಕನನ್ನು ಗುರುವಾರ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
13 ವರ್ಷದ ಬಾಲಕಿ ನಿನ್ನೆ ಸೂಲಿಬೆಲೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಇದಕ್ಕೆ ಕಾರಣವಾದ ಅತ್ಯಾಚಾರಿ ಡೇವಿಡ್ ಅಲಿಯಾಸ್ ದೇವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ ಡೇವಿಡ್ ಹಲವು ಬಾರಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈ ವಿಷಯ ಯಾರಿಗೂ ತಿಳಿಸದಂತೆ ಬಾಲಕಿಗೆ ಬೆದರಿಕೆ ಹಾಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಲಕಿ ನೀಡಿದ ಹೇಳಿಕೆಯನ್ನು ಆಧರಿಸಿ ಡೇವಿಡ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆರಿಗೆ ನೋವು ಕಾಣಿಸಿಕೊಂಡು ಬಾಲಕಿ ಆಸ್ಪತ್ರೆಗೆ ದಾಖಲಾದ ನಂತರವೇ ಈ ವಿಷಯ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್