ಕುಡ್ಲ ಏಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ಸುರೇಶ್ ಪ್ರಭು ಚಾಲನೆ
ಮಂಗಳೂರು-ಯಶವಂತಪುರ ನಡುವೆ ಸಂಚರಿಸಲಿರುವ ಕುಡ್ಲು ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಪ್ರಭು ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ...
ಮಂಗಳೂರು: ಮಂಗಳೂರು-ಯಶವಂತಪುರ ನಡುವೆ ಸಂಚರಿಸಲಿರುವ ಕುಡ್ಲ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಪ್ರಭು ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ಮಂಗಳೂರು ಜಂಕ್ಷನ್ ನಿಂದ ಉದ್ಘಾಟನಾ ವಿಶೇಷ ರೈಲಿಗೆ ಚಾಲನೆ ಸಿಕ್ಕಿದ್ದು ಈ ರೈಲು ವಾರಕ್ಕೆ ಮೂರು ಬಾರಿ ಸಂಚರಿಸಲಿದೆ. ಉದ್ಘಾಟನಾ ವೇಳೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ರೈಲು ಸಂಖ್ಯೆ 16575/16576 ಯಶವಂತಪುರದಿಂದ ಭಾನುವಾರ, ಮಂಗಳವಾರ ಮತ್ತು ಗುರುವಾರಗಳಂದು ಬೆಳಗ್ಗೆ 7.50ಕ್ಕೆ ಹೊರಟು ಮಂಗಳೂರಿಗೆ ಸಂಜೆ 5.30ಕ್ಕೆ ತಲುಪಲಿದೆ. ಮಂಗಳೂರಿನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಬೆಳಗ್ಗೆ 11.30ಕ್ಕೆ ಹೊರಟು ಯಶವಂತಪುರಕ್ಕೆ ರಾತ್ರಿ 8.30ಕ್ಕೆ ತಲುಪಲಿದೆ.
ರೈಲು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಯಡಿಯೂರು, ಬಿ.ಜಿ.ನಗರ್, ಚೆನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಮತ್ತು ಬಂಟ್ವಾಳಗಳಲ್ಲಿ ನಿಲುಗಡೆಯಾಗುತ್ತದೆ.
ರೈಲಿನಲ್ಲಿ ಏಳು ಸಾಮಾನ್ಯ ಚೈರ್ ಕಾರ್ಸ್, 5 ಸಾಮಾನ್ಯ ಮತ್ತು ದ್ವಿತೀಯ ದರ್ಜೆ ಬೋಗಿಗಳು, ಎರಡು ದ್ವಿತೀಯ ದರ್ಜೆ ಮತ್ತು ಲಗ್ಗೇಜು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗುವ ಬ್ರೇಕ್ ವ್ಯಾನ್ ಕಂಪಾರ್ಟ್ ಮೆಂಟ್ ಗಳನ್ನು ಒಳಗೊಂಡಿರುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.