ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಡ್ಯ ಜಿಲ್ಲೆಯ ಇಬ್ಬರು ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಸೇರ್ಪಡೆ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಮಂಡ್ಯ ಜಿಲ್ಲೆಯ...

ಎಲ್.ಆರ್.ಶಿವರಾಮೇ ಗೌಡ-ಸುರೇಶ್ ಗೌಡ
Sumana Upadhyaya
Updated On : 11 Apr 2017, 12:44 pm
ಬೆಂಗಳೂರು:ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಮಂಡ್ಯ ಜಿಲ್ಲೆಯ ಇಬ್ಬರು ನಾಯಕರಾದ ಮಾಜಿ ಶಾಸಕರಾದ ಕಾಂಗ್ರೆಸ್ ನ ಎಲ್.ಆರ್. ಶಿವರಾಮೆ ಗೌಡ ಮತ್ತು ಸುರೇಶ್ ಗೌಡ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ನ ತತ್ವ, ಕ್ರಮಗಳಿಂದ ಬೇಸತ್ತು ಜೆಡಿಎಸ್ ಸೇರಿರುವುದಾಗಿ ಸುರೇಶ್ ಗೌಡ ತಿಳಿಸಿದರು. ನಾಗಮಂಗಲ ತಾಲ್ಲೂಕಿನಿಂದ ಮುಂದಿನ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ. ಶಿವರಾಮೆ ಗೌಡ ಅವರನ್ನು ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಸಾಧ್ಯತೆಯಿದೆ. 
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ನಾಯಕರ ಮಧ್ಯೆ ಯಾವುದೇ ಜಗಳಗಳು ಇರಬಾರದು. ಈ ಇಬ್ಬರೂ ನಾಯಕರು ಪ್ರಭಾವಶಾಲಿಗಳಾಗಿದ್ದು ಅವರ ಬೆಂಬಲಿಗರು ಪಕ್ಷದ ಗೆಲುವಿಗೆ ಒಟ್ಟಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments