ಆರೋಪಿ ಸಂತೋಷರಾವ್ ಮತ್ತು ಸೌಜನ್ಯ
ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್‌ಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮುಂಜೂರು ಮಾಡಿದೆ.
ಈಗಾಗಲೇ ಪ್ರಕರಣ ಸಂಬಂಧ 4 ವರ್ಷ ಜೈಲು ಶಿಕ್ಷೆ ಪೂರೈಸಿರುವ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಒಂದು ಲಕ್ಷರೂ ರೂ. ಮೊತ್ತದ ಶ್ಯೂರಿಟಿ ಬಾಂಡ್, ತನಿಖೆಗೆ ಸಹಕರಿಸಬೇಕು, ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಇತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.
ಅಕ್ಟೊಬರ್ 10 2012 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು, ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು, ಆದರೆ ಸ್ಥಳೀಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣವನ್ನು ಸಿಬಿಐ ಗೆ ವರ್ಗಾಯಿಸಲಾಯಿತು. ಕುಂದಾಪುರ ಮೂಲದ ಗುತ್ತಿಗೆ ಕಾರ್ಮಿಕ ಸಂತೋಷ್ ರಾವ್ ನನ್ನು ಪೊಲೀಸರು ಬಂಧಿಸಿದ್ದರು.