ಬೆಳಗಾವಿ: ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬೆಳಗಾವಿ ಮಹಾನಗರ ಪಾಲಿಕೆ ಮಾಜಿ ಮೇಯರ್ ಶಿವಾಜಿ ಸುಂತಕರ್ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಸುಂತಕರ್ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಹಾಗೂ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಶಿವರಾಮ್ ಕಡೋಲ್ಕರ್ ಅವರ ಮಧ್ಯ ಜಗಳ ನಡೆದಿದ್ದು, ಈ ವೇಳೆ ಸುಂತಕರ್ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ನಿವೃತ್ತ ಪೊಲೀಸ್ ಅಧಿಕಾರಿ ದೂರು ನೀಡಿದ್ದಾರೆ.
ಕಡೋಲ್ಕರ್ ದೂರು ದಾಖಲಿಸಿಕೊಂಡ ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸರು ಮಾಜಿ ಮೇಯರ್ ನನ್ನು ಬಂಧಿಸಿದ್ದಾರೆ.
ಸುಂತಕರ್ ಬಿಡುಗಡೆ ಆಗ್ರಹಿಸಿ ಅವರ ಸುಮಾರು 500 ಬೆಂಬಲಿಗರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಮಾಜಿ ಮೇಯರ್ ಬೆಂಬಲಿಗರನ್ನು ಸ್ಥಳದಿಂದ ತೆರವುಗೊಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.