ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಹಲವೆಡೆ ಲಘು ಭೂಕಂಪದ ಅನುಭವ; ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ ಎಂದ ಇಲಾಖೆ

ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಬೆಂಗಳೂರು: ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಇಂದು ಬೆಳಗ್ಗೆ ಸುಮಾರು 7.45 ರ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವಾಗಿದ್ದು, ರಾಜಧಾನಿ ಬೆಂಗಳೂರಿನ ಗಿರಿನಗರ, ಕಾಮಾಕ್ಷಿ ಪಾಳ್ಯ. ಕೆಂಗೇರಿಯ ಕಾರುಬೆಲೆ ಮತ್ತು ಮಾಗಡಿ ರಸ್ತೆಯಲ್ಲಿ ಭೂಮಿ ಕಂಪಿಸಿದೆ. ಅಂತೆಯೇ  ಮಂಡ್ಯದ ಮದ್ದೂರು ತಾಲ್ಲೂಕಿನ ಮರಳಿಗ, ಒಕ್ಕರ ಹಳ್ಳಿ, ಹೊನಗಹಳ್ಳಿ, ಮಳವಳ್ಳಿಯ ಹಲಗೂರು, ನಾಗೇಗೌಡನದೊಡ್ಡಿ, ಮಂಡ್ಯ ತಾಲ್ಲೂಕಿನ ಅಲ್ಕರೆಯಲ್ಲೂ ಭೂಕಂಪನದ ಅನುಭವವಾಗಿದೆ ಎಂದು ಅಲ್ಲಿನ ನಿವಾಸಿಗಳು  ಹೇಳಿದ್ದಾರೆ.

ಇನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ರಾಜು ನಗರದದಲ್ಲಿ, ರಾಮನಗರ, ಚನ್ನಪಟ್ಟಣ, ಕನಕಪುರದಲ್ಲಿ ಮತ್ತು ತುಮಕೂರಿನ ಕುಣಿಗಲ್ ತಾಲ್ಲೂಕಿನ ಬೆಟ್ಟಳ್ಳಿ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು  ಹೇಳಲಾಗುತ್ತಿದೆ.

ರಾಜ್ಯದ ಯಾವ ಭಾಗದಲ್ಲೂ ಭೂಕಂಪನವಾದ ಕುರಿತು ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ: ಹವಾಮಾನ ಇಲಾಖೆ ಸ್ಪಷ್ಟನೆ

ಇನ್ನು ಭೂಕಂಪನದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಹವಾಮಾನ ಇಲಾಖೆ ರಾಜ್ಯದ ಯಾವುದೇ ಭಾಗದಲ್ಲೂ ಭೂಕಂಪನವಾದ ಕುರಿತು ರಿಕ್ಟರ್ ಮಾಪಕದಲ್ಲಿ ಮಾಹಿತಿ ದಾಖಲಾಗಿಲ್ಲ  ಎಂದು ಹೇಳಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕಿ ಡಾ.ಲಕ್ಷ್ಮಮ್ಮ ಅವರು, ರಾಜ್ಯದ ಯಾವುದೇ ಭಾಗದಲ್ಲೂ ಭೂಕಂಪನವಾಗಿಲ್ಲ. ರಿಕ್ಚರ್ ಮಾಪಕದಲ್ಲೂ ಭೂಮಿ ಕಂಪಿಸಿದ  ಕುರಿತು ಮಾಹಿತಿ ದಾಖಲಾಗಿಲ್ಲ. ರಿಕ್ಚರ್ ಮಾಪಕದಲ್ಲಿನ ಕನಿಷ್ಠ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಭೂಮಿ ಕಂಪಿಸಿದರೆ ಅದು ದಾಖಲಾಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT