ರಾಜ್ಯ

ಮೇವು ಕೊರತೆ: ರೈತರಿಗೆ ಜಾನುವಾರುಗಳನ್ನು ಮಾರಾಟ ಮಾಡುವ ಅನಿವಾರ್ಯತೆ

Srinivas Rao BV
ಯಾದಗಿರಿ: ರಾಜ್ಯದಲ್ಲಿ ಬರಗಾಲ ತೀವ್ರವಾಗುತ್ತಿದ್ದು, ಹಲವು ಭಾಗಗಳಲ್ಲಿ ಮೇವು ಕೊರತೆ ಎದುರಾಗಿರುವುದರಿಂದ ರೈತರು ಜಾನುವಾರುಗಳನ್ನು ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಯಾದಗಿರಿಯಲ್ಲಿಯೂ ಇದೇ ಪರಿಸ್ಥಿತಿ ಎದುರಾಗಿದ್ದು, ಅತ್ಯಂತ ಕಡಿಮೆ ದರಕ್ಕೆ ಜಾನುವಾರುಗಳನ್ನು ಮಾರಾಟ ಮಾಡಲು ರೈತರು ಮುಂದಾಗುತ್ತಿದ್ದಾರೆ. 
ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಕೆ ಮಾಡಲು ಸಾಧ್ಯವಾಗದೇ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಯಾದಗಿರಿಯ 3 ತಾಲೂಕಿನ 270 ಪ್ರಮುಖ ಹಾಗೂ ಸಣ್ಣ ನೀರಿನ ಸೆಲೆಗಳು ಬತ್ತಿಹೋಗಿದ್ದು ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಎಪಿಎಂಸಿ ಮಾರುಕಟ್ಟೆಯಲ್ಲಿ ನೂರಾರು ರೈತರು 30-40 ಸಾವಿರ ರೂ ಬೆಲೆ ಬಾಳುವ ತಮ್ಮ ಜಾನುವಾರುಗಳನ್ನು ಕೇವಲ 10-15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದಾರೆ.  ರಾಜ್ಯದಲ್ಲಿ ಬರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳನ್ನು ಖರೀದಿಸಲು ರೈತರು ಮುಂದಾಗುತ್ತಿಲ್ಲ. ಬದಲಾಗಿ ಕಸಾಯಿಖಾನೆಗಳಿಗೆ ಜಾನುವಾರುಗಳು ಮಾರಾಟವಾಗುತ್ತಿವೆ. 
SCROLL FOR NEXT