ಬೆಂಗಳೂರು: ತನ್ನ ನಾಲ್ಕು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಫ್ರಾನ್ಸ್ ರಾಯಭಾರ ಕಚೇರಿಯ ಹಿರಿಯ ಅಧಿಕಾರಿ ಪಾಸ್ಕಲ್ ಮುಜುರಿಯರ್ ಅವರನ್ನು ಬೆಂಗಳೂರಿನ ವಿಶೇಷ ಕೋರ್ಟ್ ಬುಧವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ.
2012ರ ಜೂನ್ ನಲ್ಲಿ ಪಾಸ್ಕಲ್ ಅವರ ಮಾಜಿ ಪತ್ನಿ ಸುಜಾ ಜೋನ್ಸ್ ಅವರು ತನ್ನ ಪತಿ ಮಗಳ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಿದ್ದರು.
ಸುದೀರ್ಘ ಆರು ವರ್ಷಗಳ ಕಾಲ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಸಾಕ್ಷ್ಯಾಧರಗಳ ಕೊರತೆ ಹಿನ್ನೆಲೆಯಲ್ಲಿ ಫ್ರಾನ್ಸ್ ರಾಯಭಾರ ಕಚೇರಿಯ ಅಧಿಕಾರಿಯನ್ನು ಆರೋಪಮುಕ್ತಗೊಳಿಸಿದೆ.
`ಪತಿ ಪಾಸ್ಕಲ್ ಅವರು ಮಗುವಿನ ಮೇಲೆ ಒಂದೂವರೆ ವರ್ಷದಿಂದ ಅತ್ಯಾಚಾರ ಎಸಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಪಾಸ್ಕಲ್ ಪತ್ನಿ ಸುಜಾ ಜೋನ್ಸ್ ಅವರು ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ಜೂ.14ರಂದು ಪ್ರಕರಣ ದಾಖಲಿಸಿದ್ದರು. ಆರೋಪಿ ವಿರುದ್ಧ ಭಾರತ ದಂಡ ಸಂಹಿತೆ 376ರ ಅಡಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು.
2001ರಲ್ಲಿ ಸುಜಾಳೊಂದಿಗೆ ಮದುವೆಯಾಗಿದ್ದ ಪಾಸ್ಕಲ್ ಕೇರಳದ ಎರ್ನಾಕುಲಂನಲ್ಲಿ ವಾಸವಾಗಿದ್ದ ವೇಳೆ 2005ರಲ್ಲಿ ದಂಪತಿಗಳಿಗೆ ಗಂಡು ಮಗು ಜನಿಸಿತ್ತು. 2008ರಲ್ಲಿ ಅಲ್ಲಿದ ಬೆಂಗಳೂರಿಗೆ ವರ್ಗಾವಣೆಯಾದ ನಂತರ ಆಗಸ್ಟ್ ನಲ್ಲಿ ಹೆಣ್ಣು ಮಗು ಜನಿಸಿತ್ತು. ಅದಾದ ನಂತರ ಮತ್ತೊಂದು ಮಗು ಹುಟ್ಟಿದ್ದು ಮೂರು ಮಕ್ಕಳೊಂದಿಗೆ ವಸಂತನಗರದ ಪೈನ್ ವ್ಯೂ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ವಾಸವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics