ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕಿ

ಜಿಲ್ಲೆಯ ಅಥಣಿ ತಾಲ್ಲೂಕಿನ ಝಂಜರವಾಡ ಗ್ರಾಮದ ಹೊರವಲಯದಲ್ಲಿ ಕೊಳವೆ ಬಾವಿಗೆ ಆರು ವರ್ಷದ ಬಾಲಕಿಯೊಬ್ಬಳು...

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಝಂಜರವಾಡ ಗ್ರಾಮದ ಹೊರವಲಯದಲ್ಲಿ ತೆರೆದ ಕೊಳವೆ ಬಾವಿಗೆ ಆರು ವರ್ಷದ ಬಾಲಕಿಯೊಬ್ಬಳು ಜಾರಿ ಬಿದ್ದ ಘಟನೆ ಇಂದು ನಡೆದಿದೆ.
ಕಾವೇರಿ ಮಾದರ ಎಂದು ಬಾಲಕಿಯನ್ನು ಗುರುತಿಸಲಾಗಿದ್ದು, ಶಂಕರ್ ಹಿಪ್ಪರಗಿ ಅವರ ಹೊಲದಲ್ಲಿ ಕೊರೆಯಲಾಗಿದ್ದ ಕೊಳವೆ ಬಾವಿಗೆ ಇಂದು ಸಾಯಂಕಾಲ 5 ಗಂಟೆ ಸುಮಾರಿಗೆ ಬಿದ್ದಿದ್ದಾಳೆ.
ಸುಮಾರು 400 ಅಡಿ ಕೊರೆದ ಕೊಳವೆ ಬಾವಿಯನ್ನು ಮುಚ್ಚದೆ ಹಾಗೆ ಬಿಡಲಾಗಿತ್ತು. ಹೊಲದಲ್ಲಿ ಆಟವಾಡುತ್ತಿದ್ದ ಬಾಲಕಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು ತನ್ನನ್ನು ಕಾಪಾಡುವಂತೆ ಮೊರೆಯಿಡುತ್ತಿದ್ದಾಳೆ.
ಇದೀಗ ಅಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದು, ಬಾಲಕಿಗೆ ಈಗಾಗಲೇ  ಆಕ್ಸಿಜನ್ ಪೂರೈಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕೂಡ ಕಾವೇರಿಯನ್ನು ಕೊಳವೆ ಬಾವಿಯಿಂದ ಮೇಲಕ್ಕೆ ತರುವ ರಕ್ಷಣಾ ಕಾರ್ಯ ಮುಂದುವರಿದಿದ್ದು, ಇದೀಗ ಬಾಲಕಿಯ ಕೈ ಕಾಣಲಾರಂಭಿಸಿದೆ. 

ಈಗಾಗಲೇ 130 ಅಡಿ ಆಳದವರೆಗೆ ಗುಂಡಿ ತೆಗೆಯಲಾಗಿದೆ. ಕಾವೇರಿಯ ತಾಯಿ ಸವಿತಾ ತೀವ್ರ ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ 108 ಆಂಬ್ಯುಲೆನ್ಸ್ ಆಗಮಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ