ಸಿದ್ದರಾಮಯ್ಯ 
ರಾಜ್ಯ

ದೇಶದ ಎಲ್ಲಾ ರಾಜ್ಯಗಳಿಗಿಂತ ಕರ್ನಾಟಕಕ್ಕೆ ಅತಿ ಕಡಿಮೆ ಅನುದಾನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆಗಳಿಗೆ ಹಂಚಿಕೆಯಾಗಿರುವ ರಾಜ್ಯಗಳಿಗೆ ನೀಡಿರುವ ಅನುದಾನದಲ್ಲಿ ಕರ್ನಾಟಕಕ್ಕೆ ಗಣನೀಯ ಪ್ರಮಾಣದಲ್ಲಿ ಕಡಿತ ...

ಬೆಂಗಳೂರು:  ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆಗಳಿಗೆ ಹಂಚಿಕೆಯಾಗಿರುವ ರಾಜ್ಯಗಳಿಗೆ ನೀಡಿರುವ ಅನುದಾನದಲ್ಲಿ ಕರ್ನಾಟಕಕ್ಕೆ ಗಣನೀಯ ಪ್ರಮಾಣದಲ್ಲಿ ಕಡಿತ ಉಂಟಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಮೂರನೇ ಆಡಳಿತ ಮಂಡಳಿ ಸಭೆಯಲ್ಲಿ ಅವರು ಮಾತನಾಡಿದ ಅವರು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯೂ  ಸೇರಿದಂತೆ ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆಗಳಿಗೆ ಹಂಚಿಕೆಯಾಗಿರುವ ಅನುದಾನದಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿತ ಉಂಟಾಗಿದೆ, ಕೃಷಿಯನ್ನೇ ಆಧರಿಸಿ­ರುವ ಕರ್ನಾಟಕದಲ್ಲಿ ಕಳೆದ ಆರು ವರ್ಷಗಳಿಂದ ಭೀಕರ ಬರಗಾಲ ತಲೆದೋರಿದ್ದು, ರೈತರ ಸ್ಥಿತಿ ಚಿಂತಾಜನಕವಾಗಿದೆ. ಆದರೆ, ಕೇಂದ್ರ ಸರ್ಕಾರವು ರಾಜ್ಯ ಪ್ರಕೃತಿ ವಿಕೋಪ ನಿಧಿಗೆ (ಎಸ್‌ಡಿಆರ್‌ಎಫ್‌) ಅನುದಾನ ಹಂಚಿಕೆ ಮಾಡುವಲ್ಲಿ ತೀವ್ರ ತಾರತಮ್ಯ ನೀತಿ ಅನುಸರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
2015–20ನೇ ಸಾಲಿಗಾಗಿ ರಾಜ್ಯಕ್ಕೆ ಮಂಜೂರು ಮಾಡಿರುವ ರಾಜ್ಯ ಪ್ರಕೃತಿ ವಿಕೋಪ ನಿಧಿಯು ಕೇವಲ ರು 1,375 ಕೋಟಿ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಅತಿ ಕಡಿಮೆ ಅನುದಾನವಾಗಿದೆ ಎಂದು ಅವರು ದೂರಿದರು. ಹಿಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ರು 7,097.89 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದ್ದು, ರು. 3,310 ಕೋಟಿ  ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಮಂಜೂರು ಮಾಡುವಾಗ ರಾಜ್ಯದ ಸಂಕಷ್ಟಕ್ಕೆ ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕಳೆದ ವರ್ಷ ಬರದಿಂದಾಗಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ರು. 17,193 ಕೋಟಿ ಮೌಲ್ಯದ ಬೆಳೆ ನಷ್ಟ ಆಗಿದ್ದು, ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿ (ಎನ್‌ಡಿಆರ್‌ಎಫ್‌) ಅಡಿ ನಿಯಮಾನುಸಾರ ರು. 4,702.54 ಕೋಟಿ ಪರಿಹಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ರಾಜ್ಯಕ್ಕೆ ಮಂಜೂರಾದ ಮೊತ್ತ ಕೇವಲ ರು. 1,685.54 ಕೋಟಿ ಎಂದು ಅವರು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!