ಸಿಲ್ವಿಯಾ ಮತ್ತು ದೇವನೂರ್ 
ರಾಜ್ಯ

ಪಾಕಿಸ್ತಾನಿ ಪತ್ನಿಯನ್ನು ಭಾರತಕ್ಕೆ ಕರೆತರುವಲ್ಲಿ ಯಶಸ್ವಿಯಾದ ಹುಬ್ಬಳ್ಳಿ ಹುಡ್ಗ!

ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದ ಕರ್ನಾಟಕದ ಯುವಕ ಕೊನೆಗೂ ಆಕೆಯನ್ನು ಭಾರತಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾನೆ...

ಹುಬ್ಬಳ್ಳಿ: ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದ ಕರ್ನಾಟಕದ ಯುವಕ ಕೊನೆಗೂ ಆಕೆಯನ್ನು ಭಾರತಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾನೆ.
ಡೇನಿಯಲ್ ದೇವನೂರ್ ಎಂಬಾತ 2016 ರಲ್ಲಿ ಲಾಹೋರ್ ಚರ್ಚ್ ನಲ್ಲಿ ತನ್ನ ದೂರದ ಸಂಬಂಧಿ ಸಿಲ್ವಿಯಾ ನೋರೇನ್ ಎಂಬಾಕೆಯನ್ನು ವಿವಾಹವಾಗಿದ್ದ. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ಆಕೆಯನ್ನು ಭಾರತಕ್ಕೆ ಕರೆ ತರಲು ಸಾಧ್ಯವಾಗಿರಲಿಲ್ಲ.
ಕಳೆದ ಒಂದು ವರ್ಷದಿಂದ ನಡೆದ ಸತತ ಪ್ರಯತ್ನದಿಂದ ಕೊನೆಗೂ ದಂಪತಿ ನವದೆಹಲಿಯಲ್ಲಿ ಒಂದಾಗಿದ್ದಾರೆ. 2016ರ ಜೂನ್ ನಲ್ಲಿ ಲಾಹೋರ್ ನ ಯೋಹಾನಾ ಕಾಲೋನಿಯಲ್ಲಿರುವ ಚರ್ಚ್ ನಲ್ಲಿ ಇಬ್ಬರು ವಿವಾಹವಾಗಿದ್ದರು, ಆದರೆ ತನ್ನ ಪತ್ನಿಯನ್ನು ಭಾರತಕ್ಕೆ ಕರೆ ತರಲು ಸಾಧ್ಯವಾಗಿರಲಿಲ್ಲ. ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಮಧ್ಯಸ್ಥಿಕೆಯಿಂದ ಇಬ್ಬರು ಒಂದಾಗಿದ್ದಾರೆ. ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಈ ದಂಪತಿ ಒಂದಾಗಲು ಮಾಡಿದ ಸಹಾಯದಿಂದಾಗಿ ಸಿಲ್ವಿಯಾ ಏಪ್ರಿಲ್ 19 ರಂದು ದೆಹಲಿಗೆ ಆಗಮಿಸಿದ್ದು, ಇನ್ನೆರಡು ದಿನಗಳಲ್ಲಿ ಹುಬ್ಬಳ್ಳಿ ತಲುಪಲಿದ್ದಾರೆ. 
ಭಾರತ-ಪಾಕಿಸ್ತಾನ ವಿಭಜನೆಯಾದಾಗ ಸಿಲ್ವಿಯಾ ಕುಟುಂಬ ಪಾಕಿಸ್ತಾನಕ್ಕೆ ಶಿಫ್ಟ್ ಆಯಿತು. ಸಿಲ್ವಿಯಾ ನನ್ನ ದೂರದ ಸಂಬಂಧಿ, ನಮ್ಮ ಇನ್ನೂ ಹಲವು ಸಂಬಂಧಿಕರು ನವದೆಹಲಿ ಮತ್ತು ಲಂಡನ್,ಪಾಕಿಸ್ತಾನದಲ್ಲಿದ್ದಾರೆ. ಭಾರತ ಸರ್ಕಾರಕ್ಕೆ ಅದರಲ್ಲೂ ವಿಶೇಷವಾಗಿ ಸುಷ್ಮಾ ಸ್ವರಾಜ್ ಮತ್ತು ಪ್ರಹ್ಲಾದ್  ಜೋಶಿ ಅವರಿಗೆ ಆಭಾರಿಯಾಗಿದ್ದೇನೆ ಎಂದು ದೇವನೂರ್ ತಿಳಿಸಿದ್ದಾರೆ.
ತಮ್ಮ ವಿವಾಹದ ಫೋಟೋಗಳು ಮತ್ತು ಮದುವೆ ನೋಂದಣಿ ಪ್ರಮಾಣ ಪತ್ರವನ್ನು ದೇವನೂರ್ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ. 
ಸುಷ್ಮಾ ಸ್ವರಾಜ್ ಅವರಿಗೆ ದೇವನೂರ್ ಟ್ವಿಟ್ಟರ್ ಮೂಲಕ ಮನವಿ ಸಲ್ಲಿಸಿದ್ದರು. ಆದರೆ ಎರಡು ದೇಶಗಳಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಯಾರೋಬ್ಬರು ಸಹಾಯ ಮಾಡಲು ಮುಂದಾಗಿರಲಿಲ್ಲ. ಹೀಗಾಗಿ ದೇನವೂರ್ ಸಂಸದ ಪ್ರಹ್ಲಾದ್ ಜೋಶಿಯನ್ನು ಸಂಪರ್ಕಿಸಿದ್ದರು. ನಂತರ ಸುಷ್ಮಾ ಸ್ವರಾಜ್ ಅವರ ಜೊತೆ ಚರ್ಚಿಸಿ ದೇವನೂರ್ ಅವರ ಪತ್ನಿಯನ್ನು ಭಾರತಕ್ಕೆ ಕರೆ ತರುವಲ್ಲಿ ಪ್ರಹ್ಲಾದ್ ಜೋಶಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT