ಯು.ಟಿ ಖಾದರ್ 
ರಾಜ್ಯ

ಹೋಟೆಲ್ ಗಳಲ್ಲಿ ಸೇವಾಶುಲ್ಕ ವಿಧಿಸಿದರೆ ಕಾನೂನು ಕ್ರಮ: ಯು.ಟಿ. ಖಾದರ್ ಎಚ್ಚರಿಕೆ

ಮುಂಬರುವ ದಿನಗಳಲ್ಲಿ ಹೋಟೆಲ್‌ ಮತ್ತು ರೆಸ್ಟೊರೆಂಟ್‌ಗಳಲ್ಲಿ ಸೇವಾ ಶುಲ್ಕ ವಿಧಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ...

ಬೆಂಗಳೂರು: ಮುಂಬರುವ ದಿನಗಳಲ್ಲಿ ಹೋಟೆಲ್‌ ಮತ್ತು ರೆಸ್ಟೊರೆಂಟ್‌ಗಳಲ್ಲಿ  ಸೇವಾ ಶುಲ್ಕ ವಿಧಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೋಟೆಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದಿಲ್ಲ ಎಂಬ ಫಲಕ ಹಾಕುವುದನ್ನು  ಕಡ್ಡಾಯಗೊಳಿಸಲಾಗಿದೆ ಅದರಂತೆ ಹೋಟೆಲ್ ಗಳಲ್ಲಿ ಯಾವುದೇ ರೀತಿಯ ಸೇವಾ ಶುಲ್ಕ ವಿಧಿಸುವ ಆಗಿಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಕೇಂದ್ರ ಸರ್ಕಾರ ಇದೇ 21ರಂದು ಹೊರಡಿಸಿರುವ  ಸುತ್ತೋಲೆ ಬಗ್ಗೆ  ಗ್ರಾಹಕರು ಮತ್ತು ಹೋಟೆಲ್‌ ಮಾಲೀಕರಿಗೆ ಅರಿವು ಮೂಡಿಸಲು ತಮ್ಮ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು. 
ರಾಜ್ಯದ ಕೆಲವು ಹೋಟೆಲ್‌, ರೆಸ್ಟೊರೆಂಟ್‌ಗಳಲ್ಲಿ ಶೇ6 ರಿಂದ ಶೇ 8 ವರೆಗೆ ಸೇವಾಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್ ಗಳಲ್ಲಿ ಸೇವಾಶುಲ್ಕಕ್ಕೆ ಬೇಡಿಕೆ ಇಟ್ಟರೇ ಅಥವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ