ಬಿಲ್ವ ಆಸ್ಪತ್ರೆ 
ರಾಜ್ಯ

ಬೆಂಗಳೂರು: ಬಿಲ್ವ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಇಲ್ಲಿನ ವಯ್ಯಾಲಿಕಾವಲ್ ಸಮೀಪ ಬಿಲ್ವ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು...

ಬೆಂಗಳೂರು: ಇಲ್ಲಿನ ವಯ್ಯಾಲಿಕಾವಲ್ ಸಮೀಪ ಬಿಲ್ವ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಉಂಟಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿ ಉರಿಯಿತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
3 ಮಹಡಿಯ ಕಟ್ಟಡದ ಮೊದಲ ಮಹಡಿಯ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಕಾಣಿಸಿಕೊಂಡ 20 ನಿಮಿಷಗಳಲ್ಲೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. 
ಇಂದು ಬೆಳಗ್ಗೆ 6.45ರ ಸುಮಾರಿಗೆ ಘಟನೆ ನಡೆದಿದ್ದು ಆರು ಅಗ್ನಿಶಾಮಕ ಸಿಬ್ಬಂದಿ ಸೇವೆಗೆ ಆಗಮಿಸಿದ್ದರು ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಮಹಡಿಯಲ್ಲಿದ್ದ 6 ಮಂದಿ ರೋಗಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕೆಳಗೆ ಕರೆತರಲಾಯಿತು ಎಂದು ಆಸ್ಪತ್ರೆ ಸಿಬ್ಬಂದಿ ಭರತ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಸುರಕ್ಷತಾ ಕ್ರಮಗಳನ್ನು ವಹಿಸಿದ್ದ ಕಾರಣ ಯಾವುದೇ ಗಂಭೀರ ಪರಿಸ್ಥಿತಿ ಎದುರಾಗಲಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!