ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅನಿಲ ಸೋರಿಕೆಯಿಂದ ರಸ್ತೆ ಬದಿಯಲ್ಲಿ ಹೊತ್ತಿಕೊಂಡ ಬೆಂಕಿ

ನಗರದ ಬಂಡೆಪಾಳ್ಯದ ಶಿವನ ದೇವಾಲಯ ರಸ್ತೆಯಲ್ಲಿ ನೆಲದಡಿ ಹಾಕಿದ್ದ ಗ್ಯಾಸ್‌ ಪೈಪ್‌ಲೈನ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತು. ಇದರಿಂದಾಗಿ ..

ಬೆಂಗಳೂರು: ನಗರದ ಬಂಡೆಪಾಳ್ಯದ ಶಿವನ ದೇವಾಲಯ ರಸ್ತೆಯಲ್ಲಿ ನೆಲದಡಿ ಹಾಕಿದ್ದ ಗ್ಯಾಸ್‌ ಪೈಪ್‌ಲೈನ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತು. ಇದರಿಂದಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಮುಖ್ಯರಸ್ತೆಯ ಸಿಗ್ನಲ್‌ ಬಳಿ ಕಳೆದ ತಿಂಗಳು ರಸ್ತೆ ಅಗೆದು 6 ಅಡಿ ಕೆಳಭಾಗದಲ್ಲಿ ಗ್ಯಾಸ್‌ ಪೈಪ್‌ಲೈನ್ ಅಳವಡಿಸಲಾಗಿತ್ತು. ಅದೇ ಸ್ಥಳದಲ್ಲಿ ‘ಜಿ.ಜಿ.ಎಲ್‌ ಗ್ಯಾಸ್‌ ಪೈಪ್‌ಲೈನ್‌’ ಎಂಬ ಬರಹವುಳ್ಳ ನಾಮಫಲಕ ನಿಲ್ಲಿಸಿ, ರಸ್ತೆ ಅಗೆಯದಂತೆ ಎಚ್ಚರಿಕೆ ನೀಡಲಾಗಿದೆ.
ನಾಮಫಲಕವಿದ್ದರೂ ಮುಖ್ಯರಸ್ತೆ ಬದಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಕೆಲ ದಿನಗಳಿಂದ ಜಲಮಂಡಳಿಯ ಗುತ್ತಿಗೆದಾರರು ರಸ್ತೆ ಅಗೆಯಲು ಆರಂಭಿಸಿದ್ದರು. ಈ ವೇಳೆ ಗ್ಯಾಸ್‌ ಪೈಪ್‌ಲೈನ್‌ಗೆ ಹಾನಿಯಾಗಿದ್ದು, ಅದರಿಂದಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ದೂರಿದರು. ನಂತರ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದರು. ಜಲಮಂಡಳಿ ಸಿಬ್ಬಂದಿಯೇ ಸ್ಥಳಕ್ಕೆ ಬಂದು ತಗ್ಗು ಮುಚ್ಚಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ