ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಕೊಪ್ಪಳದಲ್ಲಿ ಬೆಂಕಿಗೆ ಆಹುತಿಯಾಗಿಯಿತು. 
ರಾಜ್ಯ

ಕೊಪ್ಪಳ: ಖಾಸಗಿ ಬಸ್ಸಿಗೆ ಬೆಂಕಿ, ಪ್ರಯಾಣಿಕರು ಪಾರು

ಇಲ್ಲಿನ ಹಲಗೆರಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ 8 ಮಂದಿ ಪ್ರಯಾಣಿಕರನ್ನು ಹೊತ್ತು...

ಕೊಪ್ಪಳ: ಇಲ್ಲಿನ ಹಲಗೆರಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ 8 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಸು ಬೆಂಕಿಗೆ ಆಹುತಿಯಾಗಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಬಸ್ಸು ಬೆಂಗಳೂರಿನಿಂದ ಗದಗ್ ಜಿಲ್ಲೆಯ ಮುಂಡರಗಿಗೆ ಸಾಗುತ್ತಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಆಗಮಿಸಿದ್ದರಿಂದ ಅನಾಹುತವನ್ನು ತಪ್ಪಿಸಲಾಯಿತು. ಸಿಬ್ಬಂದಿ ಪ್ರಯಾಣಿಕರನ್ನು ರಕ್ಷಿಸಿ ಬೆಂಕಿಯನ್ನು ನಂದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರಯಾಣಿಕರ ಬಟ್ಟೆಗಳು ಬೆಂಕಿಗೆ ಸುಟ್ಟುಹೋಗಿವೆ. ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಬೆಂಕಿ ಹತ್ತಿ ಉರಿಯಲು ಕಾರಣವೇನೆಂಬುದು ತಿಳಿದುಬಂದಿಲ್ಲ. ನಂತರ ಪ್ರಯಾಣಿಕರಿಗೆ ಪ್ರಯಾಣಿಸಲು ಬೇರೆ ವ್ಯವಸ್ಥೆ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT