ನಮ್ಮ ಅಪ್ಪಾಜಿ ಕ್ಯಾಂಟೀನ್ 
ರಾಜ್ಯ

ಬೆಂಗಳೂರು: ಇಂದಿನಿಂದ ಅಪ್ಪಾಜಿ ಕ್ಯಾಂಟೀನ್ ನಲ್ಲಿ ಅತಿ ಕಡಿಮೆ ದುಡ್ಡಿಗೆ ಹೊಟ್ಟೆ ತುಂಬಾ ಊಟ!

ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್​ನಿರ್ಮಾಣಕ್ಕೆ ಮುಂದಾಗಿದೆ. ಸರ್ಕಾರದ ಇಂದಿರಾ ಕ್ಯಾಂಟೀನ್​ಗೆ ಸೆಡ್ಡು ಹೊಡೆಯಲು...

ಬೆಂಗಳೂರು: ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್​ನಿರ್ಮಾಣಕ್ಕೆ ಮುಂದಾಗಿದೆ. ಸರ್ಕಾರದ ಇಂದಿರಾ ಕ್ಯಾಂಟೀನ್​ಗೆ ಸೆಡ್ಡು ಹೊಡೆಯಲು ಇದೀಗ ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ಅಪ್ಪಾಜಿ ಕ್ಯಾಂಟೀನ್​ಆರಂಭಿಸಿದ್ದಾರೆ. 
ಶರವಣ ನಿರ್ಮಿಸಿರುವ ಅಪ್ಪಾಜಿ ಕ್ಯಾಂಟಿನ್ ಇಂದಿನಿಂದ ಕಾರ್ಯಾರಂಭ ಮಾಡಲಿದೆ. 10 ರೂಪಾಯಿಗೆ ಮುದ್ದೆ ಊಟ ಅನ್ನ ಸಾಂಬಾರ್, 5 ರೂಪಾಯಿಗೆ ಇಡ್ಲಿ ಕೇಸರಿಬಾತ್ ನೀಡುವ 'ದೇವೇಗೌಡ ನಮ್ಮ ಅಪ್ಪಾಜಿ ಕ್ಯಾಂಟೀನ್' ಇಂದು ಉದ್ಘಾಟನೆಗೊಳ್ಳಲಿದೆ
ಶ್ರೀ ಸಾಯಿ ಸಮರ್ಪಣ ಚಾರಿಟೇಬಲ್ ನಿಂದ ಈ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ಪ್ರಾರಂಭದಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತನಗರದಲ್ಲಿ ಕ್ಯಾಂಟೀನ್ ಆರಂಭವಾಗುತ್ತಿದೆ.  ಇಂದು ಬೆಳಗ್ಗೆ 11 ಗಂಟೆಗೆ ನಮ್ಮ ಅಪ್ಪಾಜಿ ಕ್ಯಾಂಟಿನ್ ಲೋಕಾರ್ಪಣೆಗೊಳ್ಳಲಿದೆ.
ಅಪ್ಪಾಜಿ ಕ್ಯಾಂಟೀನ್‌'ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, 10 ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್‌ ಬಾತ್‌,3 ರೂ.ಗೆ ಕಾಫಿ-ಟೀ ನೀಡಲಾಗುವುದು.ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.
10 ಲಕ್ಷ ವೆಚ್ಚದಲ್ಲಿ ಕ್ಯಾಂಟೀನ್ ನಿರ್ಮಾಣ ಆಗಿದ್ದು, ಆರಂಭದಲ್ಲಿ ಸಾವಿರ ಮಂದಿಗೆ ತಿಂಡಿ, ಊಟದ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್