ಡಿ,ಕೆ ಶಿವಕುಮಾರ್ 
ರಾಜ್ಯ

ಸದಾಶಿವನಗರದ ನಿವಾಸಕ್ಕೆ ಡಿಕೆಶಿ ಆಗಮನ: ಐಟಿ ಅಧಿಕಾರಿಗಳಿಂದ ಸುಮಾರು 7.5 ಕೋಟಿ ರು. ಹಣ ಜಪ್ತಿ

ರೆಸಾರ್ಟ್ ನಲ್ಲಿ ತಂಗಿದ್ದ ಡಿ.ಕೆ ಶಿವಕುಮಾರ್ ಅವರನ್ನ ಬಿಗಿ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ..

ಬೆಂಗಳೂರು: ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಕನಕಪುರ ಹಾಗೂ ನವದೆಹಲಿಯ ಸಪ್ದರ್ ಜಂಗ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಈವೇಳೆ ಶಿವಕುಮಾರ್ ಅವರ ಕಾರು ಚಾಲಕ ನಾಗರಾಜ್ ನನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸಪ್ಧರ್ ಜಂಗ್ ಎನ್ ಕ್ಲೇವ್ ನಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು 5 ಕೋಟಿ ರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. 
ಇದುವರೆಗೂ ಡಿ.ಕೆ ಶಿವಕುಮಾರ್ ಗೆ ಸೇರಿದ 39 ಸ್ಥಳಗಳ ಮೇಲೆ ಐಟಿ ದಾಳಿ ನಡೆದಿದೆ. ರಾಜ್ಯ ಸಭೆ ಚುನಾವಣೆಗೆ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಸಂಬಂಧ ಇಲಾಖೆ ತನಿಖೆ ನಡೆಸುತ್ತಿದ್ದು, ಬೆಂಗಳೂರು ಹಾಗೂ ದೆಹಲಿ ಕಚೇರಿ ಸೇರಿದಂತೆ ವಿವಿಧೆಡೆ ನಡೆದ ದಾಳಿಯಲ್ಲಿ ಒಟ್ಟು 7.5 ಕೋಟಿ ರು. ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 
ನಿನ್ನೆ ರಾತ್ರಿ ದೆಹಲಿಯಿಂದ ವಾಪಸಾಗಿದ್ದ ಡಿಕೆ ಶಿವಕುಮಾರ್ ಈಗಲ್ ಟನ್  ರೆಸಾರ್ಟ್ ನಲ್ಲೆ ವಾಸ್ತವ್ಯ ಹೂಡಿದ್ದರು. ಬೆಳಗ್ಗೆ ರೆಸಾರ್ಟ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಡಿಕೆಶಿ ಅವರ ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ರೆಸಾರ್ಟ್ ನಲ್ಲಿ ತಂಗಿದ್ದ ಡಿ.ಕೆ ಶಿವಕುಮಾರ್ ಅವರನ್ನ ಬಿಗಿ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಡಿ,ಕೆ ಶಿವಕುಮಾರ್ ಅವರನ್ನು ಕರೆ ತರಲಾಗಿದ್ದು ಹಿನ್ನೆಲೆಯಲ್ಲಿ ಮನೆಯ ಸುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!