ಡಿ.ಕೆ ಶಿವಕುಮಾರ್ 
ರಾಜ್ಯ

2ನೇ ದಿನವೂ ಮುಂದುವರಿದೆ ಐಟಿ ದಾಳಿ: ಡಿಕೆಶಿ ಮನೆಯಲ್ಲಿ 11.43 ಕೋಟಿ ರು. ನಗದು ಜಪ್ತಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಎರಡನೇ ದಿನವಾದ ಗುರುವಾರವೂ ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಆಪ್ತರ ಮನೆ ಹಾಗೂ....

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಎರಡನೇ ದಿನವಾದ ಗುರುವಾರವೂ ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಆಪ್ತರ ಮನೆ ಹಾಗೂ ಕಚೇರಿಗಳ ಮೇಲಿನ ದಾಳಿ ಮುಂದುವರೆಸಿದ್ದು, ಇದುವರೆಗೆ ಒಟ್ಟು 11.43 ಕೋಟಿ ರುಪಾಯಿ ನಗದು ಜಪ್ತಿ ಮಾಡಿದ್ದಾರೆ.
ತೆರಿಗೆ ವಂಚಿಸಿದ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿ ಕೆ ಶಿವಕುಮಾರ್ ಅವರ ದೆಹಲಿ ನಿವಾಸ, ಬೆಂಗಳೂರಿನ ಸದಾಶಿವನಗರ ಮನೆ, ಕನಕಪುರ ಮನೆ, ಮೈಸೂರಿನಲ್ಲಿರುವ ಅವರ ಮಾವನ ಮನೆ, ಅವರ ಸೋಹದರಿ ಪದ್ಮಾ ಅವರ ಮನೆ ಹಾಗೂ ಅವರ ಜ್ಯೋತಿಷಿ ದ್ವಾರಕನಾಥ್ ಸೇರಿದಂತೆ ಸಚಿವರ ಇತರೆ ಆಪ್ತರ ನಿವಾಸಗಳ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಹಲವು ದಾಖಲೆಗಳು, ಬ್ಯಾಂಕ್ ಪಾಸ್ ಬುಕ್ ಗಳು ಹಾಗೂ ಇತರೆ ಹಣಕಾಸು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ದಾಳಿಯ ವೇಳೆ ದೆಹಲಿಯ ಡಿ ಕೆ ಶಿವಕುಮಾರ್ ಅವರ ಮನೆಯಲ್ಲಿ 8.33 ಕೋಟಿ ನಗದು, ಬೆಂಗಳೂರಿನ ನಿವಾಸದಲ್ಲಿ 2.5 ಕೋಟಿ ನಗದು ಹಾಗೂ ಮೈಸೂರಿನ ಅವರ ಮಾವನ ಮನೆಯಲ್ಲಿ 60 ಲಕ್ಷ ರುಪಾಯಿ ನಗದು ಜಪ್ತಿ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಐಟಿ ದಾಳಿಯ ವೇಳೆ ಇದುವರೆಗೆ ಒಟ್ಟು 11.43 ಕೋಟಿ ರುಪಾಯಿ ನಗದು ಜಪ್ತಿ ಮಾಡಲಾಗಿದ್ದು, ಇನ್ನು ಕೆಲವು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
ಸಿಂಗಾಪುರ ಹಾಗೂ ಇತರೆ ದೇಶಗಳಲ್ಲೂ ಡಿ ಕೆ ಶಿವಕುಮಾರ್ ಅವರು ಹೂಡಿಕೆ ಮಾಡಿರುವ ಸಾಧ್ಯತೆ ಇದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!