ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿಗೂ ರಾಜ್ಯಸಭೆ ಚುನಾವಣೆಗೂ ತಳಕು ಹಾಕುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
ಐಟಿ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಡಿ.ಕೆ.ಶಿವಕುಮಾರ್ ಒಬ್ಬ ಶ್ರೀಮಂತ ವ್ಯಕ್ತಿ. ಹಲವು ವರ್ಷಗಳಿಂದರೂ ರಾಜಕೀಯದಲ್ಲಿದ್ದಾರೆ. ತನಿಖೆ ಪೂರ್ಣಗೊಳ್ಳುವುದಕ್ಕೂ ಮುನ್ನ ಯಾರೂ ಭವಿಷ್ಯವನ್ನು ನುಡಿಯಬಾರದು. ಐಟಿ ದಾಳಿ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಹೇಳುವುದು ಸರಿಯಲ್ಲ. ಈಗಲೂ ಪರಿಶೀಲನೆಗಳು ನಡೆಯುತ್ತಿವೆ. ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಳ್ಳಲುವವರೆಗೂ ಕಾಯಬೇಕಿದೆ ಎಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಒಬ್ಬ ಶ್ರೀಮಂತ ವ್ಯಕ್ತಿ ಹಾಗೂ ಹಲವು ವರ್ಷಗಳಿಂದಲೂ ರಾಜಕೀಯದಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಐಟಿ ದಾಳಿಯನ್ನು ರಾಜ್ಯಸಭೆ ಚುನಾವಣೆಯೊಂದಿಗೆ ತಳಕು ಹಾಕಬಾರದು. ಎಂದು ತಿಳಿಸಿದ್ದಾರೆ.
ಇದೇ ವೇಳೆ ಐಟಿ ದಾಳಿ ಕುರಿತು ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಅವರು, ಇಂತಹ ವಿಚಾರಗಳ ಕುರಿತಂತೆ ಬಿಜೆಪಿ ಎಂದಿಗೂ ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಈ ರೀತಿ ಗದ್ದಲವನ್ನು ಸೃಷ್ಟಿಸಿರಲಿಲ್ಲ. ಆದರೆ, ಕಾಂಗ್ರೆಸ್ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುತ್ತಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ರೀತಿಯ ಘಟನೆಗಳು ನಡೆದಿರಲಿಲ್ಲ. ವಿರೋಧ ಪಕ್ಷಗಳು ಈ ರೀತಿಯ ವಿಚಾರಗಳ ಕುರಿತು ಗದ್ದಲವನ್ನು ಸೃಷ್ಟಿಸಿರಲಿಲ್ಲ. ನನ್ನ ಮನೆ ಮೇಲೆಯೇ ಐಟಿ ದಾಳಿ ನಡೆಸಿದ್ದರೂ ಕೂಡ ನಾನು ಸುಮ್ಮನಿದ್ದೆ. ಹಾಗೂ ಪರಿಶೀಲನೆಗೆ ಸಹಕಾರ ನೀಡಿದ್ದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics