ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ ಸುರೇಶ್ 
ರಾಜ್ಯ

ನಾವು ಭಯೋತ್ಪಾದಕರಾ? ಪ್ರವೇಶ ನಿರಾಕರಿಸಿದ ಸಿಆರ್ ಪಿಎಫ್ ಸಿಬ್ಬಂದಿಗೆ ಡಿ.ಕೆ ಸುರೇಶ್ ಪ್ರಶ್ನೆ

ತೀವ್ರ ಅಸಮಾಧಾನಗೊಂಡ ಸುರೇಶ್ ನಾವು ಭಯೋತ್ಪಾದಕರಾ? ಶಸ್ತ್ರ ಸಜ್ಜಿತ ಸಿಆರ್ ಪಿಎಫ್ ಸಿಬ್ಬಂದಿ ನಿಯೋಜನೆ ಮಾಡುವ ಅಗತ್ಯವಾದರೂ ಏನಿತ್ತು....

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಸಹೋದರ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಸದಾಶಿವ ನಗರ ಮನೆಗೆ ತೆರಳಲು ಸಿಆರ್ ಪಿಎಫ್ ಸಿಬ್ಬಂದಿ ಅವಕಾಶ ನೀಡಲಿಲ್ಲ. ಇದರಿಂದ ತೀವ್ರ ಅಸಮಾಧಾನಗೊಂಡ ಸುರೇಶ್ ನಾವು ಭಯೋತ್ಪಾದಕರಾ? ಶಸ್ತ್ರ ಸಜ್ಜಿತ ಸಿಆರ್ ಪಿಎಫ್ ಸಿಬ್ಬಂದಿ ನಿಯೋಜನೆ ಮಾಡುವ ಅಗತ್ಯವಾದರೂ ಏನಿತ್ತು  ಎಂದು ಪ್ರಶ್ನಿಸಿದ್ದಾರೆ.
ತಮ್ಮ ಸಹೋದರ ಡಿ.ಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ, ಈ ಸಂಬಂಧ ವಿಚಾರಿಸಿಲು ಬಂದಿದ್ದೇನೆ ಎಂದು ಹೇಳಿದರು. 10 ನಿಮಿಷದ ನಂತರ ಐಟಿ ಅಧಿಕಾರಿಗಳು ಒಪ್ಪಿಗೆ ನೀಡಿದ ನಂತರ ಸಿಆರ್ ಪಿಎಫ್ ಸಿಬ್ಬಂದಿ ಸುರೇಶ್ ಅವರನ್ನು ಶಿವಕುಮಾರ್ ಮನೆಗೆ ತೆರಳಲು ಅವಕಾಶ ನೀಡಿದರು.
ಇದೇ ವೇಳೆ ಜೆಡಿಎಸ್ ಬಂಡಾಯ. ಶಾಸಕರಾದ ಜಮೀರ್ ಅಹ್ಮದ್ ಖಾನ್, ಎಚ್ ಸಿ ಬಾಲಕೃಷ್ಣ ಮತ್ತು ಸಂಸದ ಚಲುವರಾಯ ಸ್ವಾಮಿ ಡಿ.ಕೆ ಶಿವಕುಮಾರ್ ಅವರ ನಿವಾಸದ ಬಳಿ ಆಗಮಿಸಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಪಿಎಂ ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾರತದಲ್ಲಿ ಹಿಟ್ಲರ್  ರೀತಿ ಅಧಿಕಾರ ನಡೆಸುತ್ತಿದ್ದಾರೆ, ಐಟಿ ದಾಳಿ ಸಂಪೂರ್ಣವಾಗಿ ರಾಜಕೀಯ ದುರದ್ದೇಶದಿಂದ ಕೂಡಿದೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT