ಡಿಕೆಶಿ ಮನೆ ಹೊರಗೆ ಕಾರ್ಯಕರ್ತರ ಪ್ರತಿಭಟನೆ 
ರಾಜ್ಯ

ಐಟಿ ಅಧಿಕಾರಿಗಳಿಗೆ ರಕ್ಷಣೆ ನೀಡಿ: ರಾಜ್ಯ ಸರ್ಕಾರದ ವಿರುದ್ಧ ಐಟಿ ಡಿಜಿ ಗರಂ!

ಕಳೆದ ಮೂರು ದಿನಗಳಿಂದ ಸಚಿವ ಡಿಕೆ ಶಿವಕುಮಾರ್ ನಿವಾಸದಲ್ಲಿ ಠಿಕಾಣಿ ಹೂಡಿ ದಾಖಲೆಗಳ ಶೋಧ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ರಕ್ಷಣೆ ನೀಡಿ ಎಂದು ಐಟಿ ಡಿಜಿ ಬಾಲಕೃಷ್ಣನ್ ಅವರು ಹೇಳಿದ್ದಾರೆ.

ಬೆಂಗಳೂರು: ಕಳೆದ ಮೂರು ದಿನಗಳಿಂದ ಸಚಿವ ಡಿಕೆ ಶಿವಕುಮಾರ್ ನಿವಾಸದಲ್ಲಿ ಠಿಕಾಣಿ ಹೂಡಿ ದಾಖಲೆಗಳ ಶೋಧ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ರಕ್ಷಣೆ ನೀಡಿ ಎಂದು ಐಟಿ ಡಿಜಿ ಬಾಲಕೃಷ್ಣನ್ ಅವರು ಹೇಳಿದ್ದಾರೆ.

ನಗರದ ಸದಾಶಿವನಗರ ಹಾಗೂ ಕೆಂಗೇರಿಯಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಡಿಕೆಶಿ ಅಭಿಮಾನಿಗಳು ಹಾಗೂ ಕೆಲ ಕಾಂಗ್ರೆಸ್ ಕಾರ್ಯಕರ್ತರು ನಿವಾಸದ ಎದುರು  ಭಾರಿ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆದಾಯ ತೆರಿಗೆ ಇಲಾಖೆ ಡಿಜಿ ಬಾಲಕೃಷ್ಣನ್ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ  ಕುಂಟಿಯಾ ಅವರಿಗೆ ಇಂದು ಕರೆ ಮಾಡಿರುವ ಐಟಿ ಡಿಜಿ ಬಾಲಕೃಷ್ಣನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಫೋನ್ ಮೂಲಕ ಕರೆ ಮಾಡಿರುವ ಬಾಲಕೃಷ್ಣನ್ ಅವರು, ದಾಳಿ ವೇಳೆ ತಾವೇಕೆ ಸಿಆರ್ ಪಿಎಫ್ ಸಿಬ್ಬಂದಿಗಳನ್ನು  ಬಳಸಿಕೊಂಡಿದ್ದೇವೆ ಎಂಬುದನ್ನು ವಿವರಿಸಿದ್ದಾರೆ. ಈ ಹಿಂದೆ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸದ ಮೇಲೆ  ದಾಳಿ ಮಾಡಿದ್ದಾಗ ಅಲ್ಲಿ ಅಧಿಕಾರಿಗಳ ಕಾರುಗಳ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಿಆರ್ ಪಿಎಫ್ ಯೋಧರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಆದರೆ ಮನೆಯೊಳಗೆ ಸಿಆರ್ ಪಿಎಫ್  ಸಿಬ್ಬಂದಿ ರಕ್ಷಣೆ ಇದೆಯಾದರೂ, ಹೊರಗೆ ಯಾವುದೇ ರೀತಿಯ ರಕ್ಷಣೆ ಇಲ್ಲ. ಹೀಗಾಗಿ ಮನೆಯ ಹೊರಗೂ ರಕ್ಷಣೆ ಕಲ್ಪಿಸಿ ಎಂದು ಬಾಲಕೃಷ್ಣನ್ ರಾಜ್ಯ ಮುಖ್ಯ ಕಾರ್ಯದರ್ಶಿ ಕುಂಟಿಯಾ ಅವರಿಗೆ ಸೂಚಿಸಿದ್ದಾರೆ ಎಂದು  ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್