ಸಂಗ್ರಹ ಚಿತ್ರ 
ರಾಜ್ಯ

ವಿಚಾರಣೆಗೆ ಹಾಜರಾಗಿ: ಡಿಕೆ ಶಿವಕುಮಾರ್ ಗೆ ಆದಾಯ ತೆರಿಗೆ ಇಲಾಖೆ ಸಮನ್ಸ್ ಜಾರಿ

ಇತ್ತೀಚೆಗೆ ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕರ್ನಾಟಕ ಸಚಿವ ಡಿಕೆ ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬೆನ್ನಲ್ಲೇ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕರ್ನಾಟಕ ಸಚಿವ ಡಿಕೆ ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬೆನ್ನಲ್ಲೇ ಅಧಿಕಾರಿಗಳು ವಿಚಾರಣೆಗೆ  ಹಾಜರಾಗುವಂತೆ ಡಿಕೆ ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ದಾಳಿಯ ವೇಳೆ 300 ಕೋಟಿ ರು.ಗೂ ಅಧಿಕ ಅಘೋಷಿತ ಆಸ್ತಿ-ಪಾಸ್ತಿಯ ದಾಖಲೆ ಪತ್ರಗಳು ಪತ್ತೆಯಾಗಿದೆ ಎಂಬ ಮಾಧ್ಯಮಗಳ ವರದಿ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು  ಅವರ ಕುಟುಂಬಕ್ಕೆ ಸಮನ್ಸ್ ಜಾರಿಗೊಳಿಸಿದ್ದಾರೆ. ಶಿವಕುಮಾರ್ ಅವರ ಮಾವ ತಿಮ್ಮಯ್ಯ, ಸೋದರಿ ಪದ್ಮ, ಗುರೂಜಿ ದ್ವಾರಕನಾಥ್, ಉದ್ಯಮಿ ಸಚಿನ್ ನಾರಾಯಣ್ ಮತ್ತವರ ಕುಟುಂಬದವರಿಗೆ ಸಮನ್ಸ್ ನೀಡಲಾಗಿದೆ ಎಂದು  ತಿಳಿದುಬಂದಿದೆ.

ಇನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಸಮನ್ಸ್ ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ ಅವರು, ವೈಯುಕ್ತಿಕ ಕಾರಣಗಳಿಂದಾಗಿ ವಿಚಾರಣೆಗೆ ಹಾಜರಾಗಲು 2 ದಿನಗಳ ಕಾಲಾವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ  ಎಂದು ತಿಳಿದುಬಂದಿದೆ. ಆದರೆ ಡಿಕೆಶಿ ಮನವಿಗೆ ಆದಾಯ ಇಲಾಖೆ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶಿವಕುಮಾರ್ ಅವರ ಜೊತೆಗೆ ಅವರ ಗುರುಗಳಾದ ಜ್ಯೋತಿಷಿ ದ್ವಾರಕಾನಾಥ್  ಅವರಿಗೂ ಅಘೋಷಿತ  ಆಸ್ತಿಯ ವಿಚಾರಣೆಗಾಗಿ ಐಟಿ ಅಧಿಕಾರಿಗಳು ಸಮನ್ಸ್‌ಗೊಳಿಸಿದ್ದು, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ದ್ವಾರಕನಾಥ್ ನಾಳೆ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಬಳಿ ಇರುವ ಆಸ್ತಿ  ಪಾಸ್ತಿ ಕುರಿತು ಮಾಹಿತಿ ನೀಡುವುದು ಅನಿವಾರ್ಯವಾಗಿದೆ ಎಂದು ಹೇಳಲಾಗಿದೆ.

ಡಿಕೆಶಿ ನಿವಾಸಕ್ಕೆ ಕೈ ನಾಯಕರ ದಂಡು
ಏತನ್ಮಧ್ಯೆ ಐಟಿ ದಾಳಿ ಮತ್ತು ಇಂದು ಸಮನ್ಸ್ ಜಾರಿಯಾದ ಬೆನ್ನಲ್ಲೇ ಸಚಿವ ಡಿಕೆ ಶಿವಕುಮಾರ್ ನಿವಾಸಕ್ಕೆ ಕಾಂಗ್ರೆಸ್‌ ಪಕ್ಷದ ಹಲವು  ನಾಯಕರು ದೌಡಾಯಿಸಿದ ಪ್ರಸಂಗ ನಡೆಯಿತು. ಸದಾಶಿವ ನಗರದ ನಿವಾಸಕ್ಕೆ ಕೆಪಿಸಿಸಿ  ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್‌ಕರ್‌, ಸಚಿವ ಎಂ.ಬಿ.ಪಾಟೀಲ್‌, ಮೇಯರ್‌ ಪದ್ಮಾವತಿ ಸೇರಿದಂತೆ ಹಲವು ಸಚಿವರು ಭೇಟಿ ನೀಡಿ ಮಾತುಕತೆ ನಡೆಸಿದರು.

ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಅವರು, ಐಟಿ ಇಲಾಖೆಯಿಂದ ಸಮನ್ಸ್ ಬಂದಿದೆ. ಆದರೆ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದೇನೆ. ಕಾನೂನಿನ ಮುಂದೆ ಎಲ್ಲರೂ ಒಂದೇ..ನಾನು ಕೂಡ ವಿಚಾರಣೆಗೆ ಹಾಜರಾಗುತ್ತೇನೆ. ಅಂತೆಯೇ ಹೈಕಮಾಂಡ್ ದೆಹಲಿಗೆ ಬರುವಂತೆ ಕರೆದಿಲ್ಲ. ಕರೆದರೆ ಮಾತ್ರ ದೆಹಲಿಗೆ ತೆರಳುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್