ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಕ್ಕಳ ದಿನಾಚರಣೆ ಪ್ರಯುಕ್ತ 6ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ...

ಬೆಂಗಳೂರು: ಮಕ್ಕಳ ದಿನಾಚರಣೆ ಪ್ರಯುಕ್ತ 6ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ. ಅಪಾಯಕಾರಿ ಸನ್ನಿವೇಶದಲ್ಲಿ ಬೇರೆಯವರ ಜೀವವನ್ನು ಕಾಪಾಡಲು ವಿಶೇಷ ಧೈರ್ಯ ತೋರಿಸಿದ ಮತ್ತು ಸಂದರ್ಭಕ್ಕೆ ತಕ್ಕಂತೆ ಯೋಚಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
 ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುವುದು. ಕಳೆದ ವರ್ಷ ಆಗಸ್ಟ್ ನಿಂದ ಈ ವರ್ಷ ಜುಲೈಯವರೆಗೆ ನಡೆದ ಘಟನೆಯಾಗಿರಬೇಕು. 1999 ಆಗಸ್ಟ್ 1ರ ನಂತರ ಜನಿಸಿದವರು ಇದಕ್ಕೆ ಅರ್ಜಿ ಹಾಕಬಹುದು. 10,000 ರೂಪಾಯಿ ನಗದು ಬಹುಮಾನವಿರುತ್ತದೆ. ಅರ್ಜಿಗೆ ಆಯಾ  ಜಿಲ್ಲೆಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಿಗುತ್ತದೆ. ತುಂಬಿದ ಅರ್ಜಿಗಳನ್ನು ಈ ತಿಂಗಳ 31ರೊಳಗೆ ಸಲ್ಲಿಸಬೇಕು. ಕನ್ನಡ ಭಾಷೆಯಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT