ಸಂಗ್ರಹ ಚಿತ್ರ 
ರಾಜ್ಯ

ಹಾರತಾಳು ಹಾಲಪ್ಪ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದ ತೀರ್ಪು ಆ.17ಕ್ಕೆ ಮುಂದೂಡಿಕೆ

ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧದ ಪ್ರಕರಣದ ತೀರ್ಪು ಪ್ರಕಟಣೆಯನ್ನು ಶಿವಮೊಗ್ಗ ನ್ಯಾಯಾಲಯ ಆಗಸ್ಟ್ 17ಕ್ಕೆ ಮುಂದೂಡಿದೆ.

ಶಿವಮೊಗ್ಗ: ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧದ ಪ್ರಕರಣದ ತೀರ್ಪು ಪ್ರಕಟಣೆಯನ್ನು ಶಿವಮೊಗ್ಗ ನ್ಯಾಯಾಲಯ ಆಗಸ್ಟ್ 17ಕ್ಕೆ ಮುಂದೂಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯ ಇಂದು ತೀರ್ಪು ನೀಡಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಪರ-ವಿರೋಧ ವಾದಗಳನ್ನು ಆಲಿಸಿದ ನ್ಯಾಯಾಧೀಶರು ತೀರ್ಪು ಪ್ರಕಟಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದ್ದಾರೆ.

ಮಾಜಿ ಸಚಿವ ಹರತಾಳು ಹಾಲಪ್ಪ ಅವರು ವಿನೋಬನಗರ ಕಲ್ಲಹಳ್ಳಿಯಲ್ಲಿರುವ ಮನೆಯಲ್ಲಿ ಸ್ನೇಹಿತ ವೆಂಕಟೇಶಮೂರ್ತಿಯವರ ಪತ್ನಿ ಮೇಲೆ 2009ನೇ ನವೆಂಬರ್ 26ರಂದು ಅತ್ಯಾಚಾರ ಎಸಗಿದ್ದರೆಂದು ಆರೋಪಿಸಲಾಗಿತ್ತು.  2010ನೇ ಮೇ 2ರಂದು ಬೆಳಕಿಗೆ ಬಂದಿತ್ತು, ಅತ್ಯಾಚಾರ ಆರೋಪ ಮಾಡಿದ್ದ ವೆಂಕಟೇಶಮೂರ್ತಿ ಪತ್ನಿ ಬೆಂಗಳೂರಲ್ಲಿ ಪೊಲೀಸ್ ಮಹಾನಿರ್ದೇಶಕರು, ಶಿವಮೊಗ್ಗದ ವಿನೋಬನಗರ ಠಾಣೆಗೆ ದೂರು ನೀಡಿದ್ದರು. ರಾಜ್ಯಾದ್ಯಂತ  ಪ್ರಕರಣ ಭಾರೀ ಸದ್ದು ಮಾಡಿತ್ತು.

ಹಾಲಪ್ಪನವರ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದಂತೆಯೇ ಹಾಲಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ವಿಪಕ್ಷಗಳ ೇಒತ್ತಡಕ್ಕೆ ಮಣಿದ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಪ್ರಕರಣವನ್ನ ಸಿಐಡಿ ತನಿಖೆಗೆ ಒಪ್ಪಿಸಿದ್ದರು. ಪ್ರಕರಣದ ಬಗ್ಗೆ ಮಾರ್ಚ್ 30, 2011ರಂದು ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿತ್ತು. 7 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ಕೋರ್ಟ್ ಆಗಸ್ಟ್ 17ರಂದು ಮಹತ್ವದ ತೀರ್ಪು  ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS centenary: ಪ್ರಪ್ರಥಮ ಬಾರಿಗೆ 'ಭಾರತ ಮಾತೆ'ಯ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ, ಕೇಂದ್ರ ಸಂಪುಟ ಅನುಮೋದನೆ

Pakistan Army ವಿರುದ್ಧ ತಿರುಗಿ ಬಿದ್ದ POK ಜನತೆ, ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video

Asia Cup 2025: BCCI ವಾಗ್ದಂಡನೆ ಎಚ್ಚರಿಕೆಗೆ ಹೆದರಿದ Mohsin Naqvi, UAE Boardಗೆ ಭಾರತದ ಟ್ರೋಫಿ ಹಸ್ತಾಂತರ: ವರದಿ

SCROLL FOR NEXT