ಬೆಂಗಳೂರು: ಜಾಗತಿಕವಾಗಿ ಬೆಂಗಳೂರು ಬ್ರಾಂಡ್ ಅನ್ನು ಬಲಪಡಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಬದಲು ಒಂದೇ ಸೂರಿನಡಿ 'ಬೆಂಗಳೂರು ತಂತ್ರಜ್ಞಾನ ಸಮ್ಮೇಳನ' ಎಂಬ ಮೆಗಾ ಕಾರ್ಯಕ್ರಮ ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದ್ದಾರೆ.
ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಬದಲು ಬೆಂಗಳೂರು ತಂತ್ರಜ್ಞಾನ ಸಮ್ಮೇಳನ ಎಂಬ ಒಂದು ಮೆಗಾ ಕಾರ್ಯಕ್ರಮ ಆಯೋಜಿಸಲು ನಾವು ನಿರ್ಧರಿಸಿದ್ದೇವೆ. ಈ ಮೂಲಕ ಎಲ್ಲಾ ಕಾರ್ಯಕ್ರಮಗಳನ್ನು ಒಂದೇ ಸೂರಿನಡಿ ತರಲಾಗುತ್ತಿದೆ ಮತ್ತು ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲು ಸಹಾಯಕವಾಗುತ್ತದೆ ಎಂದು ಖರ್ಗೆ ಪಿಟಿಐಗೆ ತಿಳಿಸಿದ್ದಾರೆ.
ನವೆಂಬರ್ 16ರಿಂದ ನವೆಂಬರ್ 18ರವರೆಗೆ ಮೂರು ದಿನಗಳ ಕಾಲ ಬೆಂಗಳೂರು ತಂತ್ರಜ್ಞಾನ ಸಮ್ಮೇಳನ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.
ಕ್ರಿಸ್ ಗೋಪಾಲಕೃಷ್ಣನ್ ಹಾಗೂ ನಾಗಾನಂದ ಸೇರಿದಂತೆ ನಾಸ್ಕಾಂ ಸದಸ್ಯರೊಂದಿಗೆ ಮತ್ತು ಉದ್ಯಮ ಮುಖ್ಯಸ್ಥರೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದ್ದಾರೆ.