ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ಆಗಸ್ಟ್ 16 ರಂದು ಬೆಂಗಳೂರಿಗೆ ಆಗಮಿಸಲಿದ್ದು,ಬಿಜೆಪಿ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿರುವ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಆಗಸ್ಟ್ 12 ರಂದು ರಾಯಚೂರಿಗೆ ಭೇಟಿ ನೀಡಲಿರುವ ರಾಹುಲ್ ಅಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 16 ರಂದು ನಗರಕ್ಕೆ ಆಗಮಿಸಲಿರುವ ರಾಹುಲ್ ಅದೇ ದಿನ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಮಿತ್ ಶಾ ತಮ್ಮ ಭೇಟಿಯ ವೇಳೆ ಯಾವ್ಯಾವ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಿ, ಅದೇ ವಿಷಯಗಳ ಬಗ್ಗೆ ರಾರುಲ್ ಭಾಷಣ ಮಾಡಲಿದ್ದಾರೆ.
ರಾಯಚೂರಿನಲ್ಲಿ ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ. ಹೈದರಾಬಾದ್ ಕರ್ನಾಟಕ ವಿಶೇಷ ಮೀಸಲಾತಿ 371–ಜೆ ಜಾರಿಗೆ ವಿಶೇಷ ಕಾಳಜಿ ವಹಿಸಿದ್ದ ರಾಷ್ಟ್ರೀಯ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics