ಕೋಲಾರ: ಮರಕ್ಕೆ ಲಾರಿ ಡಿಕ್ಕಿ, 2 ಸಾವು, 5 ಜನರಿಗೆ ಗಾಯ 
ರಾಜ್ಯ

ಕೋಲಾರ: ಮರಕ್ಕೆ ಲಾರಿ ಡಿಕ್ಕಿ, 2 ಸಾವು, 5 ಜನರಿಗೆ ಗಾಯ

ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ದುರ್ಮರಣವನ್ನಪ್ಪಿ ಐವರಿಗೆ ಗಾಯವಾಗಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ...

ಕೋಲಾರ: ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ದುರ್ಮರಣವನ್ನಪ್ಪಿ ಐವರಿಗೆ ಗಾಯವಾಗಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ. 
ಕೋಲಾರ ಜಿಲ್ಲೆಯ ಕೋಲಾರ-ಮಾಲೂರು ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. 
ನಾಗರಾಜ್ (28), ರಮೇಶ್ (20) ಮೃತಪಟ್ಟ ದುರ್ದೈವನಿಗಳಾಗಿದ್ದಾರೆ. ಗಾಯಾಳುಗಳನ್ನು ಮುನಿಕೃಷ್ಣ (30), ನಾರಾಯಣಸ್ವಾಮಿ (50), ಚೆನ್ನಪ್ಪ (35), ರಾಜು (29) ಮತ್ತು ನಾಗರಾಜು (35) ಎಂದು ಗುರ್ತಿಸಲಾಗಿದೆ. 
ತರಕಾರಿಗಳನ್ನು ತುಂಬಿಕೊಂಡು ಕೊಡತೂರ್ ನಿಂದ ಲಾರಿ ಬರುತ್ತಿತ್ತು. ಲಾರಿಯ ಮುಂಭಾಗದಲ್ಲಿ ಒಟ್ಟು 7 ಮಂದಿ ಪ್ರಯಾಣ ಮಾಡುತ್ತಿದ್ದರು. ಚಾಲಕ ನಿದ್ರೆಗೆ ಜಾರಿದ್ದರಿಂದಾಗಿ ಲಾರಿ ಮೇಲಿದ್ದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಈ ವೇಳೆ ಲಾರಿ ರಭಸದಿಂದ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ದುರ್ಮರಣವನ್ನಪ್ಪಿದ್ದಾರೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು,. ಲಾರಿಯನ್ನು ಸ್ಥಳದಿಂದ ತೆರವುಗೊಳಿಸಿ ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!