ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆ 
ರಾಜ್ಯ

ಮಹಾದಾಯಿ ನದಿ ನೀರು ಹಂಚಿಕೆ: ರಾಜ್ಯ ಬಿಜೆಪಿ ನಾಯಕರಿಂದ ಗೋವಾ ಸಿಎಂ ಮನವೊಲಿಕೆ

ಮಹಾದಾಯಿ ನದಿ ನೀರಿನ ಹಂಚಿಕೆ ಸಂಬಂಧ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಮನವೊಲಿಸಲು ರಾಜ್ಯ ಬಿಜೆಪಿ ನಾಯಕರು ...

ಬೆಂಗಳೂರು: ಮಹಾದಾಯಿ ನದಿ ನೀರಿನ ಹಂಚಿಕೆ ಸಂಬಂಧ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಮನವೊಲಿಸಲು ರಾಜ್ಯ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
ಮಹದಾಯಿ ಮತ್ತು ಕಾವೇರಿ ನೀರು ವಿವಾದ ಸಂಬಂಧ ಕರೆದಿದ್ದ ಸರ್ವ ಪಕ್ಷ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆ.28 ರಂದು ಗೋವಾ ವಿಧಾನಸಭೆ ಉಪಚುನಾವಣೆಯ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಗೋವಾಕ್ಕೆ ತೆರಳಿ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರೊಂದಿಗೆ ಮಹದಾಯಿ ಸಂಬಂಧ ಮಾತುಕತೆ ನಡೆಸುತ್ತಾರೆ ಎಂದು ತಿಳಿಸಿದರು.
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಲಾಗಿದೆ. ಆದರೆ ಎರಡೂ ರಾಜ್ಯಗಳು ಸೇರಿ ಸೌಹಾರ್ದಯುತ ಪರಿಹಾರಕ್ಕೆ ಪ್ರಯತ್ನ ನಡೆಸುವುದಾಗಿ ಹೇಳಿದ್ದಾರೆ.
ಬಿಜೆಪಿ-ಕಾಂಗ್ರೆಸ್ ಮುಖಂಡರು ಹಳೆಯ ವಿಚಾರಕ್ಕೆ ಅಂಟಿಕೊಂಡಿದ್ದರು. ಗೋವಾ ಕಾಂಗ್ರೆಸ್ ವಿಪಕ್ಷ ನಾಯಕರನ್ನು ಒಪ್ಪಿಸಿ ನಾವು ಸಿಎಂ ಜೊತೆ ಚರ್ಚೆ ನಡೆಸುತ್ತೇವೆ ಬಿಜೆಪಿ ನಾಯಕರು ಹೇಳಿದರು. ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಿದ ಸಿಎಂ ಸಿದ್ದರಾಮಯ್ಯ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ನಾಲ್ಕು ಬಾರಿ ಪತ್ರ ಬರೆದಿದ್ದೇನೆ. ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಮನವಿ ಮಾಡಿದ್ದೇನೆ. ಪ್ರಧಾನಿ ಬಳಿ ನಿಯೋಗ ತೆರಳಿದ್ದೇವೆ ಎಂದು ಸಮಜಾಯಿಷಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT