ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಮತ್ತಷ್ಟು ಗಂಭೀರವಾಗಿ ನಡೆಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ಮುಖಂಡರಿಗೆ ಕರೆ ನೀಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸಿಎಂ ಸಿದ್ದರಾಮಯ್ಯ ಸರ್ಕಾರ ಪ್ರತ್ಯೇಕ ನಾಡ ಧ್ವಜ ಮತ್ತು ವೀರಶೈವ-ಲಿಂಗಾಯತ ಧರ್ಮದ ಬೇಡಿಕೆ ಪ್ರಕರಣಗಳನ್ನು ಮುಂದಿಟ್ಟುಕೊಟ್ಟಿದೆ ಎಂದು ಶಾ ಆರೋಪಿಸಿದ್ದಾರೆ.
ವೀರಶೈವ -ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್ ನ ರಾಜಕೀಯ ಆಟ, ಮುಂದಿನ ವಿಧಾನಸಭೆ ಚುನಾವಣೆಗಾಗಿ ಇದೆಲ್ಲಾ ನಡೆಯುತ್ತಿದೆ. ನಿಜವಾಗಿಯೂ ಸಿಎಂ ಗೆ ಈ ಬಗ್ಗೆ ಆಸಕ್ತಿ ಇದ್ದಿದ್ದರೇ ಕೂಡಲೇ ವಿಷಯಗಳನ್ನು ಬಗೆಹರಿಸಬಹುದಿತ್ತು ಎಂದು ಎಂದು ಅಮಿತ್ ಶಾ ಹೇಳಿದ್ದಾರೆ.
ಕಳಸಾ ಬಂಡೂರಿ ವಿಷಯದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸಬೇಕೆಂದು ರಾಜ್ಯ ಸರ್ಕಾರ ಒತ್ತಾಯಿಸುತ್ತಿದೆ, ಆದರೆ ಗೋವಾ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಗಳಿದ್ದಾಗಲೇ ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದಿತ್ತು ಎಂದು, ಆದರೆ ಹಾಗೆ ಮಾಡದ ಕಾಂಗ್ರೆಸ್ ಈಗ ಕೇಂದ್ರ ಸರ್ಕಾರವನ್ನು ದೂರುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics