ಉದ್ಘಾಟನೆಯಾದ ಇಂದಿರಾ ಕ್ಯಾಂಟೀನ್ 
ರಾಜ್ಯ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ರಾಹುಲ್ ಗಾಂಧಿ ವಿದ್ಯುಕ್ತ ಚಾಲನೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಉದ್ಘಾಟನೆ ಮಾಡಿದರು.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಉದ್ಘಾಟನೆ ಮಾಡಿದರು.

ಬೆಂಗಳೂರಿನ ಜಯನಗರದ ಕನಕನಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಅನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ಘಾಟನೆ ಮಾಡಿದರು. ಈ ವೇಳೆ ಕ್ಯಾಂಟೀನ್ ವೀಕ್ಷಿಸಿದ ರಾಹುಲ್ ಗಾಂಧಿ ಅವರು, ಕ್ಯಾಂಟೀನ್  ಸಿಬ್ಬಂದಿಯಿಂದ ಮಾಹಿತಿ ಪಡೆದರು. ಇನ್ನು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಲೋಕಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ರಾಜ್ಯ ಉಸ್ತುವಾರಿ ಕೆ.ಎಲ್. ವೇಣುಗೋಪಾಲ್, ವಿಎಸ್ ಉಗ್ರಪ್ಪ, ಬಿಬಿಎಂಪಿ ಮೇಯರ್ ಜಿ ಪದ್ಮಾವತಿ ಸೇರಿದಂತೆ ಹಲವು  ಸಚಿವರು ಹಾಗೂ ಶಾಸಕರು ಹಾಜರಿದ್ದರು.

ಮೊದಲ ಹಂತದಲ್ಲಿ 101 ಕ್ಯಾಂಟೀನ್‌ ಗಳು ಕಾರ್ಯಾಚರಿಸಲಿವೆ. ಅಕ್ಟೋಬರ್‌ ಗೆ ಎಲ್ಲ 198 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ. ಎಲ್ಲ 27 ವಿಧಾನಸಭಾ ಕ್ಷೇತ್ರದಲ್ಲಿ ತಲಾ 1 ಅಡುಗೆ ಮನೆ ನಿರ್ಮಿಸಲಾಗಿದೆ.  ಕ್ಯಾಂಟೀನ್‌ ನಲ್ಲಿ 5 ರು.ಗೆ ತಿಂಡಿ, 10 ರು.ಗೆ ಊಟ ಲಭಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು