ಬೆಂಗಳೂರು: ಮಾಜಿ ಸಚಿವ ಹೆಚ್ ವೈ ಮೇಟಿ ಲೈಂಗಿಕ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆ.17 ರಂದು ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಸೆಕ್ಸ್ ಸಿಡಿಯನ್ನು ಬಹಿರಂಗಗೊಳಿಸಿದ್ದ ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರೊಂದಿಗೆ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಸಂತೋಷ್ ಗೆ ಸಮನ್ಸ್ ಕಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳೆದುರು ಹಾಜರಾಗಿದ್ದ ಸಂತೋಷ್ ವಿಚಾರಣೆ ಎದುರಿಸಿದ್ದಾರೆ. ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿರುವ ಸಂತೋಷ್ ಈಶ್ವರಪ್ಪ ಅವರ ಆಪ್ತಸಹಾಯಕ ವಿನಾಯಕ್ ಕುಮಾರ್ ಅವರ ಅಪಹರಣ ಯತ್ನ ಪ್ರಕರಣದಲ್ಲಿಯೂ ಪೊಲೀಸ್ ವಿಚಾರಣೆ ಎದುರಿಸಿದ್ದರು.
ಮೇ ತಿಂಗಳಲ್ಲಿ ಸಿಐಡಿ ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತಾದರೂ ತಾಂತ್ರಿಕ ನೆಲೆಗಟ್ಟಿನಲ್ಲಿ ಅದನ್ನು ದೃಢಪಡಿಸಲು ವಿಫಲವಾಗಿತ್ತು. ಮೆಟಿ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಹಿಂದೆ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದ ಕಾರಣ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics