ರಾಜ್ಯ

ರೇರಾ ನೋಂದಣಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯ

Sumana Upadhyaya
ಬೆಂಗಳೂರು: ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (RERA) ಪೋರ್ಟಲ್ ನಲ್ಲಿ ಗರಿಷ್ಠ ಸಂಖ್ಯೆಯ ನೋಂದಣಿಗಳನ್ನು ಮಾಡಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೆ ಸ್ಥಾನದಲ್ಲಿದೆ ಎಂದು ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರೇರಾದ ಅಧ್ಯಕ್ಷ ಕಪಿಲ್ ಮೋಹನ್ ತಿಳಿಸಿದ್ದಾರೆ. 
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಆಯೋಜಿಸಿದ್ದ ರೇರಾ ಕುರಿತ ಆತ್ಮ ಸಮಾಲೋಚನೆಯಲ್ಲಿ ಈ ವಿಷಯ ತಿಳಿಸಿದ ಅವರು, ಮಹಾರಾಷ್ಟ್ರ ರಾಜ್ಯ ನೋಂದಣಿ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ. ನಿವೇಶನ ಹಂಚಿಕೆಯಾದವರಿಗೆ ಅಥವಾ ನಿವೇಶನ ಖರೀದಿಸಿದವರ ಹಕ್ಕುಗಳನ್ನು ಕಾಪಾಡಲು ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ನೋಂದಣಿ ಆರಂಭಿಸಲಾಗಿದೆ ಎಂದು ಹೇಳಿದರು.
ಎಲ್ಲಾ ರಿಯಲ್ ಎಸ್ಟೇಟ್ ಡೆವೆಲಪರ್ಸ್ ಗಳು rera.karnataka.gov.in ನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು.ನೋಂದಣಿ ಮಾಡಿಸಿಕೊಳ್ಳದವರಿಗೆ ಯೋಜನೆಯ ವೆಚ್ಚಕ್ಕಿಂತ ಶೇಕಡಾ 10 ರಷ್ಟು ಹೆಚ್ಚು ದಂಡ ವಿಧಿಸಲಾಗುತ್ತದೆ ಎಂದರು.
ಕರ್ನಾಟಕ ಸರ್ಕಾರ, ರಿಯಲ್ ಎಸ್ಟೇಟ್ ಪ್ರಾಧಿಕಾರ ಕಾಯ್ದೆಗೆ ಜುಲೈ 10ರಂದು ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ಬಿಲ್ಡರ್ ಗಳು ಪ್ರಾಧಿಕಾರದಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಕಡ್ಡಾಯ ಮಾಡಿದೆ.
SCROLL FOR NEXT