ರಾಜ್ಯ

ಬಂಟ್ವಾಳ ಕಲ್ಲುತೂರಾಟ ಪ್ರಕರಣ; ಹಿಂದೂ ಮುಖಂಡರ ವಿರುದ್ಧದ ಎಫ್ ಐಆರ್ ಗೆ ಹೈಕೋರ್ಟ್ ತಡೆ

Lingaraj Badiger
ಬೆಂಗಳೂರು: ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಶವಯಾತ್ರೆಯ ಸಂದರ್ಭದಲ್ಲಿ ಕಲ್ಲು ತೂರಾಟ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸತ್ಯಜಿತ್ ಸುರತ್ಕಲ್ ಸೇರಿ ಐವರು ಹಿಂದು ಮುಖಂಡರ ವಿರುದ್ಧ ಬಂಟ್ವಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೆ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಗೆ ಹಾಗೂ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಹಿಂದೂಪರ ಸಂಘಟನೆ ಮುಖಂಡರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಬಂಟ್ವಾಳ ಜೆಎಂಎಫ್ ಸಿ ಕೋರ್ಟ್ ನಲ್ಲಿ ನಡೆಯಲಿರುವ ವಿಚಾರಣೆಗೆ ಹಾಗೂ ಎಫ್ಐಆರ್ ಗೆ ಮಧ್ಯಂತರ ತಡೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ.
ಕಳೆದ ಜುಲೈ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ನಡೆಯುತ್ತಿದ್ದ ವೇಳೆ ಗಲಭೆ ನಡೆದಿತ್ತು. ಜುಲೈ 4ರಂದು ಶರತ್ ಮಡಿವಾಳ ಹತ್ಯೆಗೆ ಯತ್ನಿಸಿದ್ದು, ಜುಲೈ 7ರಂದು ಶರತ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
SCROLL FOR NEXT