ವೇದಿಕೆಯಲ್ಲಿ ವೀಣಾ ಅಚ್ಚಯ್ಯ ಜೊತೆ ಅಸಭ್ಯ ವರ್ತನೆ 
ರಾಜ್ಯ

ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್ ನಾಯಕನ ಅಸಭ್ಯ ವರ್ತನೆ: ವಿಡಿಯೋ ವೈರಲ್

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ ರಮೇಶ್ ಅವರು ವಿಧಾನ ಪರಿಷತ್ ಸದಸ್ಯೆಯೊಬ್ಬರ ಕೈಹಿಡಿದು ಅಸಭ್ಯವಾಗಿ ...

ಮಡಿಕೇರಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ ರಮೇಶ್ ಅವರು ವಿಧಾನ ಪರಿಷತ್ ಸದಸ್ಯೆಯೊಬ್ಬರ ಕೈಹಿಡಿದು ಅಸಭ್ಯವಾಗಿ ವರ್ತಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮಡಿಕೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್,  ವೇದಿಕೆಯಲ್ಲಿದ್ದ ಶಾಸಕಿ ವೀಣಾ ಅಚ್ಚಯ್ಯ ಅವರ ಕೈ ಒತ್ತಿ ಹಿಡಿದಿದ್ದಾರೆ. ಈ ವೇಳೆ ಮುಜುಗರಕ್ಕೀಡಾದ ವೀಣಾ ಅಚ್ಚಯ್ಯ, ರಮೇಶ್ ಅವರ ಕೈಯ್ಯನ್ನು ಪಕ್ಕಕ್ಕೆ ಸರಿಸಿದ್ದಾರೆ.
ಈ ವಿಡಿಯೋ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕಿ ವೀಣಾ ಅಚ್ಚಯ್ಯ ಟಿ.ಪಿ ರಮೇಶ್ ವರ್ತನೆಯಿಂದ ಬೇಸರವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ವರ್ತನೆ ಸರಿಯಲ್ಲ,ಯಾವ ಭಾವನೆಯಿಂದ ಹಾಗೆ ಮಾಡಿದರೆಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದವರು. ಪ್ರತಿಯೊಬ್ಬ ಹೆಣ್ಣು ಮಕ್ಕಳನ್ನು ಗೌರವಿಸುವುದು ಎಲ್ಲರ ಕರ್ತವ್ಯ ಎಂದು ವೀಣಾ ಅಚ್ಚಯ್ಯ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel