ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶ 
ರಾಜ್ಯ

ಸ್ವತಂತ್ರ್ಯ ಧರ್ಮದ ಮಾನ್ಯತೆ ಸಿಗುವವರೆಗೂ ಹೋರಾಟ ನಿಲ್ಲದು: ಲಿಂಗಾಯತ ಸಮುದಾಯ

ಲಿಂಗಾಯತ ಸಮುದಾಯಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಸಿಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ ಎಂದು...

ಬೆಳಗಾವಿ: ಲಿಂಗಾಯತ ಸಮುದಾಯಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಸಿಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ ಎಂದು ಬೆಳಗಾವಿ ನಗರದಲ್ಲಿ ನಡೆದ ಲಿಂಗಾಯತರ ಬೃಹತ್‌ ಸಮಾವೇಶದಲ್ಲಿ ಪ್ರತಿಜ್ಞೆ ಸ್ವೀಕರಿಸಲಾಯಿತು.
ಬೆಳಗಾವಿಯ ಲಿಂಗರಾಜ ಕಾಲೇಜು ಆವರಣದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು,ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಲಿಂಗಾಯತ ಸ್ವತಂತ್ರ್ಯ ಧರ್ಮ ಹೋರಾಟ ಸಮಿತಿ ಹೇಳಿದೆ.
ಸಿಎಂ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಸಮಿತಿ ಸದಸ್ಯರು ವೀರಶೈವ ಮಹಾಸಭಾ ಜೊತೆ ಚರ್ಚೆ ನಡೆಸಿತು. ಮಹಾರಾಷ್ಟ್ರ, ಆಂಧ್ರ ಪ್ರದೇಶ, ತಮಿಳುನಾಡು, ಮತ್ತು ತೆಲಂಗಾಣದಿಂದ ಬಂದಿದ್ದ ಲಕ್ಷಾಂತರ ಮಂದಿ ಲಿಂಗಾಯತರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ಧರ್ಮದ ಘೋಷಣೆ ಕೂಗುತ್ತಿದ್ದ ಅವರು ಗಾಂಧಿ ಟೋಪಿ ಧರಿಸಿದ್ದರು.
ಜನರ ಮನಸ್ಸು ಮತ್ತು ಹೃದಯವನ್ನು ಬದಲಾಯಿಸುವ ನಂಬಿಕೆ ಲಿಂಗಾಯತ ಧರ್ಮ ಹೊಂದಿದೆ. ರಾಜ್ಯದಲ್ಲಿ ನೂರಾರು ಲಿಂಗಾಯತ ಮಠಗಳಿವೆ,ಅದರಲ್ಲಿ ಕೇವಲ 50 ರಷ್ಟು ಮಠಗಳು ಮಾತ್ರ ಬಸವಣ್ಣನವರ ತತ್ವಗಳನ್ನು ಅನುಸರಿಸುತ್ತಿವೆ, ಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು, ಶತೃತ್ವದಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಹೇಳಿದ್ದಾರೆ.
ಎಲ್ಲರೂ ಒಗ್ಗಟ್ಟಾಗಿ  ಸೇರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಮಹಸಭಾ ದವರ ಮನವೊಲಿಸಬೇಕು ಎಂದು, ಕೂಡಲ ಸಂಗಮ  ಮಠದ ಬಸವರಾಜ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!