ಸಂಗ್ರಹ ಚಿತ್ರ 
ರಾಜ್ಯ

ಬಿಎಸ್ ವೈ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಆಸ್ತು!

ಪ್ರಮುಖ ಬೆಳವಣಿಗೆಯಲ್ಲಿ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮಕಿ ನೀಡಿದೆ ಎಂಜು ತಿಳಿದುಬಂದಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮಕಿ ನೀಡಿದೆ ಎಂಜು  ತಿಳಿದುಬಂದಿದೆ.

ಸಾಮಾಜಿಕ ಕಾರ್ಯಕರ್ತ ಸಿರಾಜಿನ್ ಬಾಷಾ ಸಲ್ಲಿಸಿದ್ದ ಅರ್ಜಿ ಜತೆಗೆ ರಾಜ್ಯ ಸರ್ಕಾರ ಕೂಡಾ ಮೇಲ್ಮನವಿ ಸಲ್ಲಿಸಿದ್ದು, ಎರಡೂ ಅರ್ಜಿಗಳನ್ನೂ ಒಟ್ಟಾಗಿ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಬಿಎಸ್ ಯಡಿಯೂರಪ್ಪ  ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ದಾಖಲಾಗಿದ್ದ ಡಿನೋಟಿಫಿಕೇಶನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈ ನಿಟ್ಟಿನಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ  ನಡೆಸಿತ್ತು. ಇದೀಗ ಸಿರಾಜಿನ್ ಬಾಷಾ ಮತ್ತು ಬಾಲರಾಜ್ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ.

ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಸಲ್ಲಿಸಲಾಗಿದ್ದ 15 ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.  ಇದರ ಜೊತೆ ವಕೀಲ ಸಿರಾಜಿನ ಬಾಷಾ ಎಂಬವರು ಅರ್ಜಿ ಸಲ್ಲಿಸಿದ್ದರು. ಈ ಎರಡೂ ಅರ್ಜಿಗಳ ವಿಚಾರಣೆಗೆ ಇದೀಗ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ.

ಅದರಂತೆ  ರಾಜ್ಯ ಸರ್ಕಾರ ಮತ್ತು ಸಿರಾಜಿನ್ ಬಾಷಾ ಅವರು ಸಲ್ಲಿಸಿದ್ದ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ನಡೆಸಲಿದ್ದು, ನ್ಯಾಯಮೂರ್ತಿ ಚಲಮೇಶ್ವರ ನೇತೃತ್ವದ ದ್ವಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ  ನಡೆಸಲಿದೆ ಎಂದು ತಿಳಿದುಬಂದಿದೆ. ಅಂತೆಯೇ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು  8 ವಾರಗಳ ಕಾಲ ಮುಂದೂಡಿದೆ.

ಇನ್ನು ರಾಜ್ಯ ಸರ್ಕಾರದ ಪರ ಖ್ಯಾತ ಹಿರಿಯ ವಕೀಲ ಹಾಗೂ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಅವರು ವಾದ ಮಂಡಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT