ರಾಜ್ಯ

ಬಿಡಿಎಯಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರವಿಲ್ಲದಿದ್ದರೂ, ಯಡಿಯೂರಪ್ಪ ಆದೇಶ ನೀಡಿದ್ದರು: ಎಸಿಬಿ

Sumana Upadhyaya
ಬೆಂಗಳೂರು: ನಗರದಲ್ಲಿರುವ ಡಾ.ಕೆ.ಶಿವರಾಮ್ ಕಾರಂತ್ ಬಡಾವಣೆಯಲ್ಲಿ  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ-ನೋಟಿಫಿಕೇಶನ್ ಮಾಡಲು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಭೂ ಮಾಲೀಕರಿಂದ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ ಆದೇಶಗಳನ್ನು ಹೊರಡಿಸಿದ್ದರು. 
ನಂತರ ಮುಖ್ಯಮಂತ್ರಿಯಾದ ಡಿ.ವಿ.ಸದಾನಂದ ಗೌಡ, 2012ರಲ್ಲಿ ವಿಧಾನ ಮಂಡಲ ಅಧಿವೇಶನದ ವೇಳೆ ಶಿವರಾಮ ಕಾರಂತ ಬಡಾವಣೆ ಜಮೀನು ಡಿನೋಟಿಫಿಕೇಶನ್ ಕುರಿತು ಸಿಐಡಿ ತನಿಖೆ ನಡೆಸಲು ಆದೇಶಿಸುವುದಾಗಿ ಸದನಕ್ಕೆ ಭರವಸೆ ನೀಡಿದ್ದರು ಎಂದು ಭ್ರಷ್ಟಾಚಾರ ನಿಗ್ರಹ ದಳ ನಿನ್ನೆ ಹೈಕೋರ್ಟ್ ಗೆ ತಿಳಿಸಿದೆ.
ಕಾರಂತ ಬಡಾವಣೆ ಡಿ ನೋಟಿಫಿಕೇಶನ್ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ ಗಳ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಎಸಿಬಿ ಪರ ವಕೀಲ ಪ್ರೊ. ರವಿವರ್ಮ ಕುಮಾರ್ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ, ನಾಳೆಗೆ ವಿಚಾರಣೆ ಮುಂದೂಡಿದೆ.
SCROLL FOR NEXT