ಶಿವಮೊಗ್ಗ: ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಆರು ಮಂದಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಶಿವಮೊಗ್ಗದ ವೀರಗಾರನ ಭೈರನಕೊಪ್ಪ ಬಳಿ ಸಂಭವಿಸಿದೆ.
ಅಶೋಕ್, ಕಾರ್ತಿಕ್, ನವೀನ್, ಕಿರಣ್, ಕೇಶವ್ ಮತ್ತು ಮಾರಿಮುತ್ತು ಮೃತ ದುರ್ದೈವಿಗಳು. ಈ ಎಲ್ಲಾ ಯುವಕರು ಸ್ನೇಹಿತರಾಗಿದ್ದು 23 ರಿಂದ 25 ವರ್ಷ ವಯಸ್ಸಿನವರಾಗಿದ್ದಾರೆ. ಮೃತ ಯುವಕರು ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದ ಅಂಬೇಡ್ಕರ್ ಕಾಲೋನಿಯವರಾಗಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಸಂತೋಷ್, ಹಾಗೂ ಕ್ಯಾಂಟರ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ಹಾಗೂ ಸಾಗರ ರಸ್ತೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರಿನ ವೇಗ ತೀವ್ರವಾಗಿದ್ದು, ತಿರುವಿನಲ್ಲಿ ವೇಗ ನಿಯಂತ್ರಿಸಲು ಸಾಧ್ಯವಾಗದೇ ಎದುರಿನಿಂದ ಲಿಕ್ಕರ್ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics