ಮಹಡಿಯಿಂದ ಮಗು ಎಸೆದ ಕಟ್ಟಡದ ಹೊರನೋಟ 
ರಾಜ್ಯ

'ಗಂಡನಿಗೆ ಪಾಠ ಕಲಿಸಲು ಮಹಡಿಯಿಂದ ಮಗಳನ್ನು ಎಸೆದು ಕೊಂದೆ'

ಮೂರನೇ ಮಹಡಿಯಿಂದ ಮಗಳನ್ನು ಎರಡು ಬಾರಿ ಎಸೆದು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸರು ಮೃತ ಬಾಲಕಿ ತಾಯಿ...

ಬೆಂಗಳೂರು: ಮೂರನೇ ಮಹಡಿಯಿಂದ ಮಗಳನ್ನು ಎರಡು ಬಾರಿ ಎಸೆದು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸರು ಮೃತ ಬಾಲಕಿ ತಾಯಿ ಸ್ವಾತಿ ಸರ್ಕಾರ್ ವಿಚಾರಣೆ ನಡೆಸಿ ಸೋಮವಾರ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಜೆ.ಪಿ ನಗರದ ಜರಗನಹಳ್ಳಿಯಲ್ಲಿರುವ ಮನೆಯ ಮೂಹನೇ ಮಹಡಿಯಿಂದ ಸ್ವಾತಿ ಸರ್ಕಾರ್ ತಮ್ಮ 7ವರ್ಷದ ಮಗುವನ್ನು ಎಸೆದು ಕೊಂದಿದ್ದರು.
ಸ್ವಾತಿ ಪತಿ ಕಂಚನ್ ಬಹು ರಾಷ್ಟ್ರೀಯ ಕಂಪನಿಯೊಂದರಲ್ಲಿ  ಬ್ಯುಸಿನೆಸ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದು, ಆತ ತನಗೆ ಕಿರುಕುಳ ನೀಡುತ್ತಿದ್ದ ಎಂದು ಆಕೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಕಳೆದ 19 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ, ದಂಪತಿಯ 7 ವರ್ಷದ ಮಗುವಿಗೆ ಮಾತು ಬರುತ್ತಿರಲಿಲ್ಲ, ಹೀಗಾಗಿ ಮಗುವಿನ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು.
ಒಂದು ವರ್ಷದ ಹಿಂದೆ ಕಂಚನ್ ಸ್ವಾತಿ ಮತ್ತು ಮಗಳು ಶ್ರೇಯಾಳನ್ನು ಬಿಟ್ಟು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಮಗಳನ್ನು ಶಾಲೆಗೆ ಸೇರಿಸುವಂತೆ ತಿಳಿಸಿದರು ಆತ ಕಿವಿಗೆ ಹಾಕಿಕೊಳ್ಳಲಿಲ್ಲ,
ಇದರಿಂದ ಮನನೊಂದಿದ್ದ ಸ್ವಾತಿ, ತನ್ನ ಗಂಡನಿಗೆ ಬುದ್ದಿ ಕಲಿಸುವ ಉದ್ದೇಶದಿಂದ ಮಗಳನ್ನು ಕೊಲ್ಲಲು ನಿರ್ಧರಿಸಿದಳು ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ,ಉದ್ದೇಶ ಪೂರ್ವಕವಾಗಿಯೇ ಎರಡು ಬಾರಿ ಆಕೆ ಮಗಳನ್ನು ಮಹಡಿಯಿಂದ ಎಸೆದಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಚನ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಮಗಳು ಶ್ರೇಯಾಳಿಗೆ ಯಾವಾಗಲೂ ಪತ್ನಿ ಸ್ವಾತಿ ಥಳಿಸುತ್ತಿದ್ದಳು, ಇದರಿಂದ ಬೇಸತ್ತು ನಾನು ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!