ಸಾಂದರ್ಭಿಕ ಚಿತ್ರ 
ರಾಜ್ಯ

ಸಿಬ್ಬಂದಿ ನೇಮಕಾತಿಗೆ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಅನುಮತಿ

ಸಿಬ್ಬಂದಿ ಕೊರತೆ ಅನುಭವಿಸುತ್ತಿದ್ದ ರಾಜ್ಯದ ವಿಶ್ವವಿದ್ಯಾಲಯಗಳು ಇನ್ನು ಸ್ವಲ್ಪ ನಿಟ್ಟುಸಿರುಬಿಡಬಹುದು...

ಬೆಂಗಳೂರು: ಸಿಬ್ಬಂದಿ ಕೊರತೆ ಅನುಭವಿಸುತ್ತಿದ್ದ ರಾಜ್ಯದ ವಿಶ್ವವಿದ್ಯಾಲಯಗಳು ಇನ್ನು ಸ್ವಲ್ಪ ನಿಟ್ಟುಸಿರುಬಿಡಬಹುದು. ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ನಿನ್ನೆ ನಡೆದ ಸಭೆಯಲ್ಲಿ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಈ ವಿಷಯ ತಿಳಿಸಿದ್ದಾರೆ. ರಾಜ್ಯದ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಸಭೆಯಲ್ಲಿ ಹಾಜರಿದ್ದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಸಚಿವರು ಹಸಿರು ನಿಶಾನೆ ತೋರಿಸಿದರು.
ರಾಜ್ಯ ಹಣಕಾಸು ಇಲಾಖೆಯ ನಿರ್ದೇಶನದ ಪ್ರಕಾರ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿ ನೇಮಕವನ್ನು ಹಲವು ವರ್ಷಗಳ ಕಾಲ ತಡೆಹಿಡಿಯಲಾಗಿತ್ತು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 2003ರಿಂದ ನೇರ ನೇಮಕಾತಿಯಿರಲಿಲ್ಲ ಬೆಂಗಳೂರು ವಿಶ್ವವಿದ್ಯಾಲಯದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಉಪನ್ಯಾಸಕರ ಮೂಲಕವೇ ನಿಭಾಯಿಸಲಾಗುತ್ತಿತ್ತು. ಹಲವು ಕೋರ್ಸ್ ಗಳಿಗೆ ಖಾಯಂ ಬೋಧಕ ಸಿಬ್ಬಂದಿ ಇಲ್ಲದ್ದರಿಂದ ಇದೀಗ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವುದು ನಮಗೆ ಬಹುದೊಡ್ಡ ನಿರಾಳವಾಗಿದೆ. ಇಷ್ಟು ವರ್ಷ ನಾವು ಅತಿಥಿ ಉಪನ್ಯಾಸಕರನ್ನು ಸೇವೆಗೆ ನೇಮಕ ಮಾಡಿಯೇ ಪರಿಸ್ಥಿತಿ ನಿಭಾಯಿಸುತ್ತಿದ್ದೆವು ಎಂದು ವಿಶ್ವವಿದ್ಯಾಲಯವೊಂದರ ಉಪ ಕುಲಪತಿಗಳು ಹೇಳುತ್ತಾರೆ.
ಸರ್ಕಾರದ ಒಪ್ಪಿಗೆ ಸಿಕ್ಕಿದ ನಂತರ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆಗೆ ಮತ್ತು ಉನ್ನತ ಶಿಕ್ಷಣ ಇಲಾಖೆಗೆ ಅನುಮೋದನೆಗೆ ಕಳುಹಿಸಬೇಕು ಎಂದು ವಿಶ್ವವಿದ್ಯಾಲಯವೊಂದರ ರಿಜಿಸ್ಟ್ರಾರ್ ಹೇಳುತ್ತಾರೆ.
2012ರಲ್ಲಿ ಇದೇ ರೀತಿಯ ಆದೇಶ: ಟಿ.ಬಿ.ಜಯಚಂದ್ರ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಇಂತಹದ್ದೇ ಆದೇಶ ನೀಡಲಾಗಿತ್ತು. ಯುಜಿಸಿಯಿಂದ ಮಮೊ ಬಂದ ನಂತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿತ್ತು. ಸುಮಾರು 300 ಹುದ್ದೆಗಳನ್ನು ಭರ್ತಿ ಮಾಡುವಂತೆ ಇಲಾಖೆ ಒಪ್ಪಿಗೆ ನೀಡಿದರೂ ಕೂಡ ನೇಮಕಾತಿ ಕಾರ್ಯ ಇದುವರೆಗೆ ನಡೆದಿಲ್ಲ.
ಮಹಿಳಾ ವಿವಿಗಳಿಗೆ ನಿರಾಳತೆ: ಕೆಲವು ವರ್ಷಗಳ ಹಿಂದೆ, ರಾಜ್ಯ ಉನ್ನತ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯವನ್ನು ವಿಶೇಷ ಕೇಸು ಎಂದು ಪರಿಗಣಿಸಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅನುವು ಮಾಡಿಕೊಟ್ಟಿತ್ತು, ಆ ಸಮಯದಲ್ಲಿ ಈ ವಿಶ್ವವಿದ್ಯಾಲಯದಲ್ಲಿ ಅತಿ ಹೆಚ್ಚಿನ ಹುದ್ದೆಗಳಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ